ಮೈಸೂರು: ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ತೂಕ ಮತ್ತು ಅಳತೆ ಇಲಾಖೆ, ಅರಿವು ಸಂಸ್ಥೆ ವತಿಯಿಂದ ದೇವರಾಜ ಮಾರುಕಟ್ಟೆ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡ ಗ್ರಾಹಕ ಜಾಗೃತಿ ಕಾರ್ಯಕ್ರಮ ನಡೆಯಿತು.
ಮೈಸೂರು ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಮಾತನಾಡಿ, ಗ್ರಾಹಕರು ತಾವು ಪಡೆಯುವ ಸೇವೆಯಿಂದ ಅನ್ಯಾಯವಾದಲ್ಲಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸುವ ಮೂಲಕ ನ್ಯಾಯ ಪಡೆಯಬೇಕು ಎಂದರು.
ಸಮಾಜಸೇವಕ ಕೆ. ರಘುರಾಮ್ ವಾಜಪೇಯಿ ಮಾತನಾಡಿ, ಗ್ರಾಹಕರು ಯಾವುದೇ ವಸ್ತುಗಳನ್ನು ಖರೀದಿಸುವ ಸಂದರ್ಭ ತೂಕ ಮತ್ತೆ ಅಳತೆಯಲ್ಲಿ ಮೋಸ ಹೋಗದಂತೆ ಎಚ್ಚರ ವಹಿಸಬೇಕು. ಕಲಬೆರಿಕೆ ಪದಾರ್ಥಗಳು, ರಾಸಾಯನಿಕ ಮಿಶ್ರಿತ ಪದಾರ್ಥಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ಮೈಸೂರು ವಕೀಲರ ಸಂಘದ ಅಧ್ಯಕ್ಷ ಕಾರ್ಯದರ್ಶಿ ಉಮೇಶ್, ದೇವರಾಜ ಸಂಚಾರ ಪೊಲೀಸ್ ಠಾಣೆ ಎಎಸ್‌ಐ ನಾರಾಯಣ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಅಧ್ಯಕ್ಷ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅರಿವು ಸಂಸ್ಥೆ ಅಧ್ಯಕ್ಷ ಶ್ರೀೀಕಾಂತ್ ಕಶ್ಯಪ್ ಹಾಗೂ ಇತರರು ಇದ್ದರು.