ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗುತ್ತಿಗೆ ಪೌರ ಕಾರ್ಮಿಕ ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಾಂಧೀನಗರದ ನಿವಾಸಿ ಗಣೇಶ್ ಕುಮಾರ್(43) ಮೃತರು. ನಗರ ಪಾಲಿಕೆಯಲ್ಲಿ ಗುತ್ತಿಗೆ ಪೌರ ಕಾರ್ಮಿಕರಾಗಿದ್ದ ಗಣೇಶ್ ಕುಮಾರ್, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಬೇಸರ ಗೊಂಡಿದ್ದರು.
ಬುಧವಾರ ರಾತ್ರಿ ಕೋಣೆಯಲ್ಲಿ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಕುಟುಂಬದವರು ನೀಡಿದ ದೂರಿನ ಮೇರೆಗೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.