ಶಿರ್ವ: ನಮ್ಮ ದೇಶದ ಸಂವಿಧಾನ ಶ್ರೇಷ್ಠವಾಗಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಿಗೆ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ನಾವೆಲ್ಲರೂ ತಿಳಿದುಕೊಂಡು ದೇಶದ ರಕ್ಷಣೆ ಮತ್ತು ಅಭಿವೃದ್ಧಿಗೆ ಸಹಕರಿಸಬೇಕೆಂದು ವಿದ್ಯಾವರ್ಧಕ ಸಂ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಹೇಳಿದರು.
ವಿದ್ಯಾವರ್ಧಕ ಆಂಗ್ಲ ವಾಧ್ಯಮ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಾಲಾ ಸಂಚಾಲಕ ಮಟ್ಟಾರ್ ರತ್ನಾಕರ ಹೆಗ್ಡೆ ಧ್ವಜಾರೋಹಣ ವಾಡಿದರು. ಪ್ರಾಂಶುಪಾಲೆ ನೀಶಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುವಾನ ವಿತರಿಸಲಾಯಿತು.
ಶಾಲಾ ಮುಖ್ಯಶಿಕ್ಷಕಿ ನಿಮಿತಾ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕಿ ಸಾಯಿಪ್ರಭಾ ಭಟ್ ಸ್ವಾಗತಿಸಿದರು. ಜ್ಯೋತಿ ವಂದಿಸಿದರು. ವಿದ್ಯಾರ್ಥಿ ನಾಯಕ ರಹೀಶ್ ರಹೀಮ್, ಅನಿತಾ ಉಪಧ್ಯಾಯ ನಿರೂಪಿಸಿದರು.