ಎನ್.ಆರ್.ಪುರ: ಮಾನ್ಸೂನ್ ಪ್ರಾರಂಭದಲ್ಲಿ ನಿಂತ ನೀರಿನಲ್ಲಿ ಮೊಟ್ಟೆ ಇಡುವ ಸೊಳ್ಳೆಗಳಿಂದ ಮಲೇರಿಯಾ, ಚಿಕನ್ ಗುನ್ಯಾ ಕಾಯಿಲೆಗಳು ಬರುತ್ತವೆ ಎಂದು ಸಾಂಕ್ರಾಮಿಕ ರೋಗ ಶಾಸ್ತ್ರಜ್ಞ ಡಾ.ಆಕರ್ಷ ತಿಳಿಸಿದರು.
ಪಪಂನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ಪಪಂ ಆಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಆರೋಗ್ಯ ಕಾಪಾಡುವಲ್ಲಿ ಸ್ವಚ್ಛತಾ ಕಾರ್ಮಿಕರ ಪಾತ್ರ ಬಹಳ ಪ್ರಮುಖವಾಗಿದೆ. ಪಟ್ಟಣದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡಿದರೆ ಸಾಂಕ್ರಾಮಿಕ ರೋಗಗಳನ್ನ ಹತೋಟಿಗೆ ತರಬಹುದು ಎಂದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾತನಾಡಿ, ಡೆಂೆ ಒಂದು ಸಾಂಕ್ರಾಮಿಕ ರೋಗ. ಈಡಿಸ್, ಈಜಿಪ್ಟ್ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ರೋಗ ವೇಗವಾಗಿ ಹರಡುತ್ತದೆ. ವಿಪರೀತ ತಲೆನೋವು, ಕಣ್ಣು ಕೆಂಪಾಗುವುದು, ಹಸಿವಾಗದಿರುವುದು ,ಮೈಕೈ ನೋವು ಕಂಡು ಬರುತ್ತದೆ. ಈ ಕಾಯಿಲೆಗೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಲಕ್ಷಣ ಆಧಾರಿತ ಚಿಕಿತ್ಸೆಯಿಂದ ಈ ಕಾಯಿಲೆ ಗುಣಪಡಿಸಬೇಕು. ಜ್ವರ ಬಂದ ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಕಾಯಿಲೆ ಪತ್ತೆ ಹಚ್ಚಬಹುದು ಎಂದು ತಿಳಿಸಿದರು.
ಪಪಂ ಸದಸ್ಯೆ ಸುರಯ್ಯಬಾನು, ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ರಾಜಸ್ವ ನಿರೀಕ್ಷಕ ವಿಜಯ್‌ಕುಮಾರ್, ಸಂಯೋಜಕ ಲಕ್ಷ್ಮಣ್ ಗೌಡ, ಆಪ್ತ ಸಮಾಲೋಚಕ ಸುಹಾಸ್, ಕಚೇರಿ ಸಿಬ್ಬಂದಿ ಅಜಯ್, ಹರೀಶ್, ಆಶಾ ಇತರರಿದ್ದರು.