ಅಳವಂಡಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಕ್ರಮವನ್ನು ಅಳವಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳ ಜೊತೆಗೆ ಸಂವಾದ ಮತ್ತು ಅಭಿಪ್ರಾಯ ಸಭೆಯನ್ನು ಗ್ರಾಮದಲ್ಲಿ ಸೆ.27 ರಂದು ಹಮ್ಮಿಕೊಂಡಿದ್ದಾರೆ.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಇವರ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ. ಕಾರ್ಯಕ್ರಮಕ್ಕೆ ಸಂಸದ ರಾಜಶೇಖರ ಹಿಟ್ನಾಳ ಚಾಲನೆ ನೀಡಲಿದ್ದಾರೆ.
ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ಉಪಾಧ್ಯಕ್ಷೆ ಶಾರಮ್ಮ ಈಳಿಗೇರ, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಾಲಚಂದ್ರನ್ ಇತರರು ಭಾಗವಹಿಸಲಿದ್ದಾರೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಅನ್ವರ್ ಹುಸೇನ ಗಡಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.