ಎಸ್‌ಡಿಎಂ ನೆನಪಿನಂಗಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚಿತ್ರಾವತಿ ಅವರಿಗೆ ಸಹಾಯಧನ ಹಸ್ತಾಂತರಿಸಲಾಯಿತು.  
ಜಿಲ್ಲೆ

ಸಾಧನೆಗೆ ಅಡ್ಡಿಯಲ್ಲ ಬಡತನ : ಡಾ. ಪ್ರಭಾಕರ ಶಿಶಿಲ ಅನಿಸಿಕೆ

ಸೌಮ್ಯ ಆರ್

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಬಡತ ಸಾಧನೆಗೆ ತಡೆಗೋಡೆ ಎಂದು ತಿಳಿಯಬಾರದು. ಛಲ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಹೇಳಿದರು.

ಗುರುವಾರ ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಸರಣಿ ಎಸ್‌ಡಿಎಂ ನೆನಪಿನಂಗಳದ ಹದಿಮೂರನೇ ಕಂತಿನ ಕಾರ್ಯಕ್ರಮದಲ್ಲಿ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಚಿತ್ರಾವತಿ ಅವರಿಗೆ ಸಹಾಯಧನ ಹಸ್ತಾಂತರಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಕಲಿತು ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಅವರ ಅನುಭವಗಳನ್ನು ಈಗಿನ ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲು ಇಂತಹ ಕಾರ್ಯಕ್ರಮ ಪೂರಕವಾಗಿದೆ ಎಂದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪೀತಾಂಬರ ಹೆರಾಜೆ, ಹಿರಿಯ ವಿದ್ಯಾರ್ಥಿ ತಿಮ್ಮಪ್ಪ ಗೌಡ ಹಾಗೂ ಕಾಲೇಜಿನ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ. ಎಂ. ಪಿ. ಶ್ರೀನಾಥ್ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಅಭಿಲಾಷ್ ವಂದಿಸಿ, ಡಾ. ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.