ಹೈರಿಗೆ ಗ್ರಾಮದಲ್ಲಿ ಆಯೋಜಿಸಿದ್ದ ಕಣ್ಣಿನ ಉಚಿತ ತಪಾಸಣೆ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು. ಡಾ.ಟಿ.ರವಿಕುಮಾರ್, ಲಿಂಗರಾಜು, ಮರಿದೇವಯ್ಯ, ಮುದ್ದು ಮಲ್ಲಯ್ಯ, ದಿನೇಶ್, ಶಿವಣ್ಣ, ಶಿವರಾಜು, ದೇವರಾಜು, ಮಲ್ಲೇಶ್ ಇದ್ದರು. 
ಜಿಲ್ಲೆ

ಬುದ್ಧ ಚಾರಿಟಬಲ್ ಟ್ರಸ್ಟ್ ಕಾರ್ಯಕ್ಕೆ ಅಗತ್ಯ ಸಹಕಾರ

ಅಭಿನಯ್ ಎಚ್.ಎಂ

ಎಚ್.ಡಿ.ಕೋಟೆ; ಬುದ್ಧ ಚಾರಿಟಬಲ್ ಟ್ರಸ್ಟ್, ಆರೋಗ್ಯ ಇಲಾಖೆ, ರೋಟರಿ ಸಂಸ್ಥೆ ಹಾಗೂ ಬೆಂಗಳೂರಿನ ಶಂಕರ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ತಾಲೂಕಿನ ಹೈರಿಗೆ ಗ್ರಾಮದಲ್ಲಿ ಮಂಗಳವಾರ ಕಣ್ಣಿನ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್, ಬುದ್ಧ ಚಾರಿಟಬಲ್ ಟ್ರಸ್ಟ್ ಐದು ವರ್ಷಗಳಿಂದ ಸಾಮಾಜಿಕ, ಆರ್ಥಿಕವಾಗಿ ಬಡಜನರಿಗೆ ಸಹಕಾರ ನೀಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ಕಾರ್ಯಕ್ರಮ ರೂಪಿಸುತ್ತಿದ್ದು, ಇದಕ್ಕೆ ತಾಲೂಕು ಆಡಳಿತ ವತಿಯಿಂದ ಸಂಪೂರ್ಣವಾಗಿ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಟ್ರಸ್ಟ್ ಅಧ್ಯಕ್ಷ ಲಿಂಗರಾಜು ಮಾತನಾಡಿದರು. ಹೈರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಾ ನಾಗರಾಜು, ಟ್ರಸ್ಟ್ ಕಾರ್ಯದರ್ಶಿ ಮಂಜುನಾಥ್, ಮುಖಂಡರಾದ ಮರಿದೇವಯ್ಯ, ಮುದ್ದು ಮಲ್ಲಯ್ಯ, ದಿನೇಶ್, ಶಿವಣ್ಣ, ಶಿವರಾಜು, ದೇವರಾಜು, ಮಲ್ಲೇಶ್ ಇದ್ದರು.