ಜಿಲ್ಲೆ

ಸಹಕಾರಿ ಬ್ಯಾಂಕ್ ಭದ್ರತೆ ಹೆಚ್ಚಳ: ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾಹಿತಿ

Manikya M

ಬೆಳ್ತಂಗಡಿ: ಸಹಕಾರಿ ಬ್ಯಾಂಕ್ ವ್ಯವಸ್ಥೆಗೆ ಭದ್ರತೆ ಹೆಚ್ಚಿಸಿಕೊಳ್ಳಲು ನಡೆದ ಹಲವಾರು ಸಭೆಗಳಲ್ಲಿ ಸೂಚನೆ ನೀಡಲಾಗಿದೆ. 2025 ಫೆ.27 ರಂದು ಸಹಕಾರ ಸಂಘಗಳ ನಿಬಂಧಕರು ಸುತ್ತೋಲೆ ಹೊರಡಿಸಿ ಸಹಕಾರಿ ಬ್ಯಾಂಕ್ ವ್ಯವಸ್ಥೆಗೆ ಭದ್ರತೆ ಹೆಚ್ಚಿಸಿಕೊಳ್ಳಲು ಎಲ್ಲಾ ಬ್ಯಾಂಕುಗಳಿಗೂ ನಿರ್ದೇಶನ ನೀಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಸರ್ಕಾರ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಹಕಾರ ಸಂಘ, ಬ್ಯಾಂಕುಗಳು ಸ್ವಾಯತ್ತ ಸಂಸ್ಥೆಗಳಾಗಿದ್ದು ಸಂಘದಲ್ಲಿರುವ ಆಭರಣ ಹಾಗೂ ನಗದಿನ ಸುರಕ್ಷತೆಗೆ ಆಯಾಯ ಸಹಕಾರ ಸಂಘಗಳು, ಸರ್ಕಾರಿ ಸಹಕಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸೂಚಿಸಿರುವ ಭದ್ರತಾ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಗ್ರಾಹಕರ ಹಾಗೂ ಸದಸ್ಯರ ಹಿತ ಕಾಪಾಡಿಕೊಳ್ಳಬೇಕಾಗುತ್ತದೆ. ಸುರಕ್ಷತೆ ವಿಚಾರದಲ್ಲಿ ಸುತ್ತೋಲೆ ಹೊರಡಿಸಲಾಗಿದ್ದು ಸಹಕಾರ ಸಂಘಗಳು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.