ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 
ಜಿಲ್ಲೆ

ಮೇ 7ಕ್ಕೆ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆ

ನವೀನ ಬಿ.ಎಂ

ಶಿವಮೊಗ್ಗ: ಮೊದಲ ಹಂತದ 14 ಕ್ಷೇತ್ರಗಳ ಚುನಾವಣೆ ಮುಗಿದಿದೆ. ಮೇ 7ಕ್ಕೆ ಶಿವಮೊಗ್ಗ ಸೇರಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಹಾಗಾಗಿ ಏ.30ರಂದು ಹುಬ್ಬಳ್ಳಿಯಲ್ಲಿ ಪಕ್ಷದ ಹಿರಿಯರ ಕೋರ್ ಕಮಿಟಿ ಸಭೆ ಕರೆದಿದ್ದು ಮುಂದಿನ 14 ಕ್ಷೇತ್ರಗಳಲ್ಲಿ ಶ್ರಮ ಹಾಕುವ ಸಲುವಾಗಿ ಸಲಹೆ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೊದಲ ಹಂತದ 14ರಲ್ಲಿ 13 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕಲಬುರಗಿ, ಬೀದರ್, ರಾಯಚೂರು ಭಾಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಾಗುವುದು ಎಂದರು.
ಸಂಸದ ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಮಾಜಿ ಸಿಎಂ ಸಂತಾಪ ಸೂಚಿಸಿದರು. ದಲಿತ ನಾಯಕ ಮಾತ್ರವಲ್ಲದೆ ಅವರೊಬ್ಬ ಉತ್ತಮ ಜನಪ್ರತಿನಿಧಿಯಾಗಿದ್ದರು. ಅವರ ಅಗಲಿಕೆ ತುಂಬ ನೋವುಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.