ಜಿಲ್ಲೆ

ಕಾರ್ಕಳದ ಇಬ್ಬರು ಪೊಲೀಸರಿಗೆ ಕರೊನಾ ಪಾಸಿಟಿವ್: 3 ಪೊಲೀಸ್ ಠಾಣೆ, ಸರ್ಕಲ್ ಇನ್ಸ್​ಪೆಕ್ಟರ್​ ಕಚೇರಿ ಸೀಲ್​​ಡೌನ್​

ಉಡುಪಿ: ಜಿಲ್ಲೆಯ ಕಾರ್ಕಳ ತಾಲೂಕಿನ ಇಬ್ಬರು ಪೊಲೀಸರಿಗೆ ಕರೊನಾ ಪಾಸಿಟಿವ್ ದೃಢಪಟ್ಟಿದೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್, ಅಜೆಕಾರು ಪೊಲೀಸ್ ಠಾಣೆಯ ಎಎಸ್ಐ ಗೆ ಕರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಒಂದೆ ಕಟ್ಟಡದಲ್ಲಿರುವ ಕಾರ್ಕಳ ನಗರ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ, ವೃತ್ತ ನಿರೀಕ್ಷಕರ ಕಚೇರಿ ಮತ್ತು ಅಜೆಕಾರು ಪೊಲಿಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಬ್ಬರು ಪೊಲೀಸರು ಠಾಣೆಗಳಲ್ಲಿ, ಚೆಕ್ ಪೋಸ್ಟ್ ಗಳಲ್ಲಿ, ಹೈವೇ ಪ್ಯಾಟ್ರೋಲ್ ಗಳಲ್ಲಿ ಕಾರ್ಯ ನಿರ್ವಹಿಸಿದ್ದರು.

ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲಾ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನು ಪರೀಕ್ಷೆ ನಡೆಸಿ ಕ್ವಾರಂಟೈನ್ ಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸೋಂಕು ಹೊಂದಿದ್ದ ಪೊಲೀಸರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲಾ ಪೊಲೀಸರನ್ನು ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು ಎಂದು ಪೊಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.