ಜಿಲ್ಲೆ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕರೊನಾಗೆ 7 ಬಲಿ: ಚೇತರಿಕೆ ಪ್ರಮಾಣದಲ್ಲಿಯೂ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಅನ್​ ಲಾಕ್​-1 ಜಾರಿಯಾಗಿ ನಾಲ್ಕು ದಿನ ಕಳೆದಿದೆ. ಹಾಗೇ 300-500ರವರೆಗೂ ಏರಿಕೆಯಾಗಿದ್ದ ಸೋಂಕಿತರ ಸಂಖ್ಯೆಯಲ್ಲೂ ಸ್ವಲ್ಪ ಮಟ್ಟಿಗೆ ಇಳಿಕೆ ಕಾಣುತ್ತಿರುವುದು ರಾಜ್ಯದ ಜನತೆಯ ಪಾಲಿಗೆ ಆಶಾದಾಯಕ ಬೆಳವಣಿಗೆಯಾಗಿದೆ.

ಕಳೆದ 24 ಗಂಟೆಯಲ್ಲಿ 271 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 6516ಕ್ಕೆ ಏರಿದೆ. ಇಂದು 257 ಮಂದಿ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ ಡಿಸ್​ಚಾರ್ಜ್​ ಆದವರ ಸಂಖ್ಯೆ 3440 ಆಗಿದೆ. ಇಂದು 7 ಮಂದಿ ಕೊವಿಡ್​-19ನಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 79ಕ್ಕೆ ಏರಿದೆ. 271 ಹೊಸ ಕೇಸ್​ಗಳಲ್ಲಿ 92 ಅಂತಾರಾಜ್ಯ ಪ್ರಯಾಣಿಕರಾಗಿದ್ದು, 14 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಲವ್​ ಜಿಹಾದ್​? ಮುಸ್ಲಿಂ ಯುವಕನ ಬಲೆಗೆ ಸಿಲುಕಿದಳೇ 18ರ ಯುವತಿ…

24 ಗಂಟೆಯಲ್ಲಿ ಇಂದು ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಒಟ್ಟು 97 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರ 36, ಉಡುಪಿ 22, ಕಲಬುರಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್​, 10, ಹಾಸನ ಮತ್ತು ಮೈಸೂರು 9, ತುಮಕೂರು 7, ರಾಯಚೂರು ಹಾಗೂ ಉತ್ತರ ಕನ್ನಡ 4, ಚಿತ್ರದುರ್ಗ ಮತ್ತು ರಾಮನಗರ 3, ಮಂಡ್ಯ 2, ಬೆಳಗಾವಿ, ವಿಜಯಪುರ ಮತ್ತು ಕೋಲಾರದಲ್ಲಿ ತಲಾ ಒಂದು ಪ್ರಕರಣಗಳು ದೃಢಪಟ್ಟಿವೆ.