ಜಿಲ್ಲೆ

ರಾಜ್ಯದಲ್ಲಿ 598ಕ್ಕೇರಿದ ಸೋಂಕಿತರ ಸಂಖ್ಯೆ: ಈವರೆಗೂ 25 ಸಾವು, ನಿಮ್ಮ ಜಿಲ್ಲೆಯಲ್ಲಿ ಪರಿಸ್ಥಿತಿ ಹೇಗಿದೆ?

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಶನಿವಾರದ ಬೆಳಗಿನ ವರದಿಯ ಪ್ರಕಾರ 9 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದು, ಒಟ್ಟು ಪ್ರಕರಣ 598ಕ್ಕೆ ಏರಿದೆ. ಆಶಾದಾಯಕ ಬೆಳವಣಿಗೆಯೆಂದರೆ ಈವರೆಗೆ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ.

ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ 9 ಹೊಸ ಪ್ರಕರಣ ಬೆಳಕಿಗೆ ಬಂದಿದ್ದು, ಇಷ್ಟು ದಿನ ಎರಡು ಅಂಕಿಯಲ್ಲಿದ್ದ ಪ್ರಕರಣಗಳು ಇದೀಗ ಒಂದಂಕಿಗೆ ಬಂದಿರುವುದು ರಾಜ್ಯದ ಜನತೆಗೆ ಖುಷಿಯ ವಿಚಾರವಾಗಿದೆ. ಇಲ್ಲಿಯವರೆಗೆ 25 ಮಂದಿ ಮೃತಪಟ್ಟಿದ್ದಾರೆ.

ಹೊಸ ಸೋಂಕಿತರ ವಿವರ ಈ ರೀತಿ ಇದೆ:

ಬೀದರ್​-1, ತುಮಕೂರು- 2, ವಿಜಯಪುರ-2, ಬೆಳಗಾವಿ-1, ದಕ್ಷಿಣ ಬಾಗಲಕೋಟೆ ಜಿಲ್ಲೆ ಜಮಖಂಡಿ- 1, ಚಿಕ್ಕಬಳ್ಳಾಪುರ-1 ಮತ್ತು ಬೆಂಗಳೂರು ನಗರ ಜಿಲ್ಲೆ-1.

ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.

ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.

ಯಾವ ಜಿಲ್ಲೆಗಳಲ್ಲಿ ಎಷ್ಟು ಸೋಂಕಿತರು ಇದ್ದಾರೆ, ಎಷ್ಟು ಮಂದಿ ಬಿಡುಗಡೆ ಹೊಂದಿದ್ದಾರೆ ಎಂಬ ಬಗ್ಗೆ ವಿವರ ಇಲ್ಲಿದೆ...