ಜಿಲ್ಲೆ

ಜಿಲ್ಲೆಯಲ್ಲಿ ಮತ್ತೆ ಆರು ಪಾಸಿಟಿವ್

ಮಂಡ್ಯ: ಜಿಲ್ಲೆಯಲ್ಲಿ ಮತ್ತೆ ಆರು ಜನರಲ್ಲಿ ಕರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 406ಕ್ಕೇ ಏರಿಕೆಯಾಗಿದೆ.

ಭಾನುವಾರ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್ ಬುಲೆಟಿನ್‌ನಲ್ಲಿ ಸೋಂಕು ದೃಢಪಟ್ಟಿರುವುದು ಘೋಷಣೆಯಾಗಿದೆ. ಈ ಎಲ್ಲರೂ ಮಹಾರಾಷ್ಟ್ರದಿಂದ ಕೆ.ಆರ್.ಪೇಟೆ ತಾಲೂಕಿಗೆ ಬಂದಿದ್ದರು. ಕ್ವಾರಂಟೈನ್‌ನಲ್ಲಿಟ್ಟು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಪತ್ತೆಯಾಗಿದೆ.

ಈವರೆಗೂ 339 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದು, 67 ಜನರು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.