ದೇವದುರ್ಗ ಶಾಸಕ ಶಿವನಗೌಡ ನಾಯಕ. 
ಜಿಲ್ಲೆ

ನಿಗಮ, ಮಂಡಳಿ ನೇಮಕಕ್ಕೆ ಅಸಮಾಧಾನ ಹೊರಹಾಕಿದ ದೇವದುರ್ಗ ಶಾಸಕ ಶಿವನಗೌಡ ನಾಯಕ

Raichur

ರಾಯಚೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವರ್ಷಾಚರಣೆ ಸಂದರ್ಭದಲ್ಲಿ 24 ಶಾಸಕರಿಗೆ ನಿಗಮ, ಮಂಡಳಿಗಳ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕವಾದ ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಸೋಮವಾರ ಅಸಮಾಧಾನ ಹೊರಹಾಕಿದ್ದಾರೆ. ನಾಲ್ಕನೇ ಬಾರಿ ಶಾಸಕರಾಗಿ, ಒಮ್ಮೆ ಸಚಿವನಾಗಿ ಕಾರ್ಯನಿರ್ವಹಿಸಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾಗಿ ಹೇಳಿರುವ ಅವರು, ನಿಗಮ, ಮಂಡಳಿ ಅಧ್ಯಕ್ಷನನ್ನಾಗಿ ಮಾಡಿ ಎಂದು ಕೇಳಿಲ್ಲ ಎಂದು ತಿಳಿಸಿದ್ದಾರೆ. ನೇಮಕ ಮಾಡುವ ಮುನ್ನ ನನ್ನ ಅಭಿಪ್ರಾಯ ಕೇಳಿಲ್ಲ. ಕೇಳಿದ್ದರೆ ಕಾರ್ಯಕರ್ತರ ಹೆಸರು ಸೂಚಿಸುತ್ತಿದ್ದೆ. ನನಗೆ ಯಾಕೆ ನಿಗಮದ ಅಧ್ಯಕ್ಷನನ್ನಾಗಿ ಮಾಡಿದ್ದಾರೆ ಎನ್ನುವುದು ಗೊತ್ತಿಲ್ಲ. ಈ ಬಗ್ಗೆ ಪಕ್ಷದ ಹಿರಿಯರೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.