ಚಿಕ್ಕಮಗಳೂರು: ಭ್ರಷ್ಟಾಚಾರ ಆರೋಪದಲ್ಲಿ ತಹಸೀಲ್ದಾರ್ ಎಸಿಬಿ ಬಲೆಗೆ ಸಿಕ್ಕಿಹಾಕಿಕೊಂಡು ಜೈಲುಪಾಲಾಗಿದ್ದರೆ, ಮತ್ತೊಂದೆಡೆ ಅವರ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಹಸೀಲ್ದಾರ್ ಅವರ ಚಾಲಕ ವಿಜೇತ್ (26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹೆಗ್ತೂರು ಗ್ರಾಮದ ನಿವಾಸಿಯಾಗಿದ್ದ ವಿಜೇತ್ ಮನೆಯ ಸಮೀಪದ ಅಡಿಕೆ ತೋಟದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಶೃಂಗೇರಿ ತಹಸೀಲ್ದಾರ್ ಅಂಬುಜಾ ಅವರ ಕಾರು ಚಾಲಕನಾಗಿದ್ದ.
ತಹಸೀಲ್ದಾರ್ ಅಂಬುಜಾ ಜ.6ರಂದು ಎಸಿಬಿ ಬಲೆಗೆ ಬಿದ್ದಿದ್ದರು. ಇವರು ಬೋಗಸ್ ಹಕ್ಕುಪತ್ರ ನೀಡಿ ವಂಚಿಸಿದ್ದ ಆರೋಪದ ಮೇಲೆ ಜೈಲುಪಾಲಾಗಿದ್ದಾರೆ. ಅಂಬುಜಾ ಪ್ರಕರಣ ಹಿನ್ನೆಲೆಯಲ್ಲಿ ಇನ್ನಿತರ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಮಧ್ಯೆ ಆಕೆಯ ಚಾಲಕ ವಿಜೇತ್ ಆತ್ಮಹತ್ಯೆ ಪ್ರಕರಣ ನಡೆದಿದೆ.