ಜಿಲ್ಲೆ

ಅಧಿಕಾರಿಗಳ ವರ್ಗಾವಣೆ, ಕಾಮಗಾರಿಗಳ ನಿರ್ವಹಣೆಯಲ್ಲಿ ಭ್ರಷ್ಟಾಚಾರ

Rest of Bengaluru - Chikkaballapura - Venkatesh

ಚಿಕ್ಕಬಳ್ಳಾಪುರ: ಅಧಿಕಾರಿಗಳ ವರ್ಗಾವಣೆ, ಕಾಮಗಾರಿಗಳ ನಿರ್ವಹಣೆ ಸೇರಿದಂತೆ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಇದರಿಂದ ಆಡಳಿತ ವ್ಯವಸ್ಥೆಯು ಹದಗೆಟ್ಟಿದೆ ಎಂದು ಸಂಸದ ಡಾ ಕೆ.ಸುಧಾಕರ್ ವ್ಯಂಗ್ಯವಾಡಿದರು.

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಪ್ರಶ್ನಿಸುತ್ತಿದ್ದವರ ಇಲ್ಲಿನ ಅಧಿಕಾರದ ಅವಧಿಯಲ್ಲಿ ಏನಾಗುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪ್ರತಿಯೊಂದರಲ್ಲೂ ಅವ್ಯವಹಾರ, ಭ್ರಷ್ಟಾಚಾರ ಹೆಚ್ಚಾಗಿದೆ. ಅಧಿಕಾರಿಗಳ ವರ್ಗಾವಣೆ, ಕಾಮಗಾರಿಗಳ ಅನುಮೋದನೆಗೆ ಹಣವನ್ನು ಇಂತಿಷ್ಟು ನಿಗದಿಪಡಿಸಲಾಗಿದೆ ಎಂದು ಆರೋಪಿಸಿದರು.

*ಬಾಗೇಪಲ್ಲಿ ಶಾಸಕರಿಗೆ ಗೊತ್ತಿಲ್ಲವೇ?

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳು, ಮದ್ಯ ಮಾರಾಟದ ಬಗ್ಗೆ ಗಮನ ಸೆಳೆಯಲಾಗಿದೆ. ಇದರ ಬಗ್ಗೆ ಅಲ್ಲಿನ ಶಾಸಕರಿಗೆ ಏನೂ ಗೊತ್ತಿಲ್ಲವೇ? ಎಂದು ಸಂಸದರು ವ್ಯಂಗ್ಯವಾಡಿದರು.

ಬಾಗೇಪಲ್ಲಿಯಲ್ಲಿನ ಗಂಭೀರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲಾಗಿದೆ. ಆದರೆ, ಎಲ್ಲೂ ಶಾಸಕರ ಹೆಸರನ್ನು ಹೇಳಿಲ್ಲ. ಅವರು ಏತಕ್ಕೆ ಕೋಪ ಮಾಡಿಕೊಳ್ಳಬೇಕು?. ಪ್ರತಿಯೊಂದು ರಸ್ತೆಗಳು ಹದಗೆಟ್ಟಿವೆ. ಮದ್ಯ ಮಾರಾಟಕ್ಕೆ ವ್ಯಸನಿಗಳು ಸಂಖ್ಯೆಯು ಹೆಚ್ಚಾಗಿದೆ. ಇದರ ಬಗ್ಗೆ ಶಾಸಕರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.