ಜಿಲ್ಲೆ

ನ್ಯಾಯಲಯಗಳು ಜ್ಞಾನ ವೃದ್ಧಿಸುವ ಕೇಂದ್ರಗಳು

ಮರಿದೇವ ಹೂಗಾರ

ಹುಬ್ಬಳಿ: ಜಿಲ್ಲೆ ಹಾಗೂ ತಾಲೂಕು ನ್ಯಾಯಾಲಯಗಳು ಜ್ಞಾನ ವೃದ್ಧಿಸುವ ಕೇಂದ್ರಗಳಾಗಿವೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕ್ ಹೇಳಿದರು.

ಹುಬ್ಬಳ್ಳಿ ವಕೀಲರ ಸಂಘದ ವತಿಯಿಂದ ಇಲ್ಲಿಯ ಹೊಸೂರಿನ ಹೊಸ ಕೋರ್ಟ್ ಸಭಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ವಕೀಲರ ದಿನಾಚರಣೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೆಳಹಂತದ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಮೂಲಕ ಹೆಚ್ಚಿನ ಜ್ಞಾನ ಪಡೆಯಬಹುದು. ಕೆಳ ಹಂತದ ನ್ಯಾಯಾಲಯಗಳಲ್ಲಿ ಪಡೆದ ಜ್ಞಾನವು ಉನ್ನತ ನ್ಯಾಯಾಲಯಗಳಲ್ಲಿ ಬಳಕೆಯಾಗುತ್ತದೆ. ವಕೀಲರು ತಮಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಹೈಕೋರ್ಟ್ ನ್ಯಾಯಮೂರ್ತಿ ಸಿದ್ದಪ್ಪ ಸುನಿಲ್ದತ್ತ ಯಾದವ್ ಮಾತನಾಡಿದರು.

ಜಿಲ್ಲಾ ನ್ಯಾಯಾಧೀಶೆ ಬಿ.ಜಿ. ರಮಾ ಅಧ್ಯಕ್ಷತೆ ವಹಿಸಿದ್ದರು.

ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕ್‌ಅವರು ಯುವ ವಕೀಲರು ಮತ್ತು ನ್ಯಾಯಾಧೀಶರೊಂದಿಗೆ ಸಂವಾದ ನಡೆಸಿದರು.

ಹೈಕೋರ್ಟ್ ನ್ಯಾಮೂರ್ತಿ ವಿ. ಶ್ರೀಶಾನಂದ, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ಎಂ.ಎಸ್. ಬಾಣದ, ಕಾರ್ಯದರ್ಶಿ ಹನುಮಂತ ಶಿಗ್ಗಾಂವ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ವಕೀಲರು ಭಾಗವಹಿಸಿದ್ದರು.