ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 1,203 ಮಂದಿಗೆ ಕರೊನಾ ವರದಿ ನೆಗೆಟಿವ್ ಬಂದಿದೆ. 219 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6510ಕ್ಕೆ ಏರಿಕೆಯಾಗಿದೆ. 219 ಮಂದಿಯಲ್ಲಿ ಉಡುಪಿ 115, ಕುಂದಾಪುರ 68, ಕಾರ್ಕಳದ 33 ಮಂದಿ, ಹೊರ ಜಿಲ್ಲೆಯ ಮೂವರು ಸೋಂಕಿತರು. ವಿವಿಧ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಾಲ್ವರು ಮೃತಪಟ್ಟಿದ್ದು, ಇವರಿಗೆ ಸೋಂಕು ಖಚಿತಗೊಂಡಿತ್ತು. ಹೋಂ ಮತ್ತು ಆಸ್ಪತ್ರೆ ಐಸೋಲೇಶನ್‌ನಿಂದ 183 ಮಂದಿ ಗುಣವಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 3,768 ಮಂದಿ ಸೋಂಕಿನಿಂದ ಸಂಪೂರ್ಣ ಮುಕ್ತಿ ಹೊಂದಿದ್ದಾರೆ.
ಕೋವಿಡ್-19 ರ‌್ಯಾಂಡಮ್ ಪರೀಕ್ಷೆ ವ್ಯವಸ್ಥೆ ಚುರುಕುಗೊಂಡಿದೆ. ಮಂಗಳವಾರ 1845 ಮಂದಿಯ ಗಂಟಲ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇನ್ನೂ 1610 ಮಂದಿಯ ವರದಿ ಫಲಿತಾಂಶ ನಿರೀಕ್ಷೆ ಇದೆ. 2676 ಸಕ್ರಿಯ ಪ್ರಕರಣಗಳಿವೆ. - ಜಿ.ಜಗದೀಶ್ ಜಿಲ್ಲಾಧಿಕಾರಿ, ಉಡುಪಿ