ಜಿಲ್ಲೆ

ಕೋವಿಡ್ ಪ್ರಮಾಣ ದರ ಶೇ.30.24 ವರದಿ

ಪಂಕಜ ಕೆ.ಎಂ.

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 496 ಗಂಟಲು ದ್ರವ ಮಾದರಿಗಳ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 150 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕು ದೃಢ ಪ್ರಮಾಣ ಶೇ.30.24 ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 527 ಇದ್ದು, ಈ ಪೈಕಿ 520 ಸೋಂಕಿತರು ಮನೆ ಆರೈಕೆಯಲ್ಲಿದ್ದಾರೆ. ಉಳಿದಂತೆ 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.