ಜಿಲ್ಲೆ

ಕರೊನಾ ಶಂಕಿತ ಮರಳಿ ಆಸ್ಪತ್ರೆಗೆ

Dakshina Kannada

ದರ್ಬೆ: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಿಂದ ಮಂಗಳವಾರ ಪರಾರಿಯಾಗಿದ್ದ ಕರೊನಾ ಸೋಂಕು ಶಂಕಿತ ವ್ಯಕ್ತಿಯನ್ನು ಬಜರಂಗ ದಳದ ಕಾರ್ಯಕರ್ತರು ಹಿಡಿದು ಮತ್ತೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಿಂದ ತಪ್ಪಿಸಿಕೊಂಡಾತ ನಗರದ ತಾಲೂಕು ಕಚೇರಿ ರಸ್ತೆಯಲ್ಲಿ ತಿರುಗಾಡುತ್ತಿದ್ದು, ಅಲ್ಲೇ ಬಿದ್ದುಕೊಂಡಿದ್ದ. ಬಜರಂಗ ದಳ ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ಶಂಕಿತ ವ್ಯಕ್ತಿಯನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿದರು. ಬಳಿಕ ಆತನನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು.