ಚಾಲಕ, ಕ್ಲೀನರ್‌ಗೆ ಗಾಯ ಹಿಂದುಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ಹೊರವಲಯದ ಸುವರ್ಣ ವಿಧಾನಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾನುವಾರು ಸಾಗಿಸುತ್ತಿದ್ದ ಲಾರಿ ತಡೆದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಲಾರಿ, ಚಾಲಕ ಮತ್ತು ಕ್ಲೀನರ್‌ನನ್ನು ಥಳಿಸಿದ್ದಾರೆ.
ಭಾನುವಾರ ಸಂಜೆ ಮಹಾರಾಷ್ಟ್ರ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ಲಾರಿಯಲ್ಲಿ ಜಾನುವಾರು ಸಾಗಿಸುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಲಾರಿ ತಡೆದಿದ್ದಾರೆ. ಆಗ ಲಾರಿ ಚಾಲಕ, ಕ್ಲೀನರ್‌ನೊಂದಿಗೆ ಮಾತಿನ ಚಕಮಕಿ ನಡೆದಿದೆ. ಉದ್ರಿಕ್ತ ಯುವಕರ ಗುಂಪು ಚಾಲಕ ಮತ್ತು ಕ್ಲೀನರ್‌ನನ್ನು ಥಳಿಸಿ ಲಾರಿ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಗಾಯಗೊಂಡಿರುವ ಚಾಲಕ ಮತ್ತು ಕ್ಲೀನರ್‌ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಕ್ವೋಟ್…1
ಜಾನುವಾರು ಸಾಗಿಸುತ್ತಿದ್ದ ಲಾರಿ ತಡೆದ ಯುವಕರ ಗುಂಪು ಪ್ರತಿಭಟನೆ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲಾಗಿದ್ದು, ಹಸುಗಳನ್ನು ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ನಿಯಮ ಮೀರಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು.
ರೋಹನ್ ಜಗದೀಶ, ಡಿಸಿಪಿ, ಬೆಳಗಾವಿ
.