ಸೋಮವಾರಪೇಟೆ: ಹಸುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹಳ್ಳಿ ಮೈಸೂರು ಗ್ರಾಮದ ಲಿಂಗಪ್ಪ, ಲಿಂಗರಾಜು, ಗೋಣಿಮರೂರು ಗ್ರಾಮದ ಚಂದ್ರಪ್ಪ ಬಂಧಿತರು.
ಚೌಡ್ಲು ಗ್ರಾಮದ ಪರಮೇಶ್ ಅವರ ಕೊಟ್ಟಿಗೆಯಿಂದ ಹಸುವನ್ನು ಕದ್ದು ಆಟೋಗೆ ತುಂಬಿಕೊಂಡು ಹಳಿ ್ಳ ಮೈಸೂರು ಕಡೆಗೆ ಸಾಗಿಸುತ್ತಿದ್ದ ಸಂದರ್ಭ ಖಚಿತ ಮಾಹಿತಿ ಮೇರೆಗೆ ಸೋಮವಾರಪೇಟೆ ಪೊಲೀಸರು ಬಾಣಾವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ಸೋಮವಾರಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.