ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತದಲ್ಲಿ ಜಿಲ್ಲೆಯಲ್ಲಿನ ನಿವೇಶನ ಹಾಗೂ ವಸತಿ ರೈತರಿಗೆ ಕೂಡಲೇ ಮನೆಗಳನ್ನು ನೀಡಬೇಕು ಎಂದು ಒತ್ತಾಯಿಸಿ ಸಿಪಿಐ ಪಕ್ಷದಿಂದ ನಡೆದ ಪ್ರತಿಭಟನಾ ಸಭೆಯನ್ನು ಉz್ದೆÃಶಿಸಿ ಪಕ್ಷದ ಮುಖಂಡ ಸಿದ್ದನಗೌಡ ಪಾಟೀಲ್ ಮಾತನಾಡಿದರು. ರಾಧಾ ಸುಂದರೇಶ್, ರಮೇಶ್ ಕೆರಮಕ್ಕಿ, ವಿಜಯಕುಮಾರ್ ಮತ್ತಿತರರಿದ್ದರು. 
ಜಿಲ್ಲೆ

ನಿವೇಶನ ರಹಿತರಿಗೆ ವಸತಿಗೆ ಒತ್ತಾಯಿಸಿ ಸಿಪಿಐ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿನ ವಸತಿ ಮತ್ತು ನಿವೇಶನ ರೈತರಿಗೆ ಕೂಡಲೇ ನಿವೇಶನ ಮಂಜೂರು ಮಾಡಿ ಮನೆಗಳನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿ ಸಿಪಿಐ ಮುಖಂಡರು ಮತ್ತು ಕಾರ್ಯಕರ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಜಿಲ್ಲೆಯಲ್ಲಿ ನಿವೇಶನ ಮತ್ತು ವಸತಿ ರಹಿತ ಬಡವರ ಸಮಸ್ಯೆ ವಿಪರೀತವಾಗಿದೆ. ಕಾರ್ಮಿಕರು ತಮ್ಮ ಕೂಲಿಯ ಬಹು ಭಾಗವನ್ನು ಮನಗಳಿಗೆ ಬಾಡಿಗೆ ನೀಡುವ ಸ್ಥಿತಿ ನಿರ್ಮಾಣವಾಗಿದೆ. ಸಾವಿರಾರು ಕಾರ್ಮಿಕ ಕುಟುಂಬಗಳಿಗೆ ತಮ್ಮದು ಎಂದು ಹೇಳಿಕೊಳ್ಳಲು ಮನೆ ಇಲ್ಲದ ಸ್ಥಿತಿಯಿದೆ. ಹೀಗಾಗಿ ಕೂಡಲೇ ವಸತಿ ರೈತರಿಗೆ ಮನೆ ಕಟ್ಟಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಸತಿ ರೈತರಿಗೆ ಮನೆ ನಿರ್ಮಿಸಿ ಕೊಡುವ ಭರವಸೆ ನೀಡಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಇದುವರೆಗೂ ಯಾರೊಬ್ಬರಿಗೂ ಮನೆ ನಿರ್ಮಿಸಿ ಕೊಟ್ಟಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕೂಡಲೇ ನಿವೇಶನ ರೈತರಿಗೆ ನಿವೇಶನಗಳನ್ನು ಹಂಚುವ ಮತ್ತು ಮನೆಗಳನ್ನು ನಿರ್ಮಿಸಿ ಕೊಡುವ ಕಾರ್ಯ ಆರಂಭಿಸಬೇಕು. ನಿವೇಶನ ಹಂಚಿಕೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಕಾಯ್ದಿರಿಸಲು ಜಿಲ್ಲಾಡಳಿತ ಕೂಡಲೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ವಸತಿ ಮತ್ತು ನಿವೇಶನ ರೈತರನ್ನು ಗುರುತಿಸಲು ನಿರಂತರವಾಗಿ ಸಮೀಕ್ಷಾ ಕಾರ್ಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ವಸತಿ ರಹಿತರು ನಗರಸಭೆ, ಪುರಸಭೆ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ಸರ್ಕಾರಿ ಭೂಮಿಯಲ್ಲಿ ಹತ್ತಾರು ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಎಲ್ಲರಿಗೂ ೯೪ಸಿ ಅಡಿಯಲ್ಲಿ ಹಕ್ಕುಪತ್ರ ನೀಡಬೇಕು ಹಾಗೂ ಅರ್ಜಿ ಸಲ್ಲಿಸದವರಿಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಬೇಕು ಎಂದು ಆಗ್ರಹಿಸಿದರು.
ನಗರ ಪ್ರದೇಶಕ್ಕೆ ಹೊಂದಿಕೊAಡಿರುವ ಸರ್ಕಾರಿ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದನ್ನು ಕೈ ಬಿಟ್ಟು ಈ ಜಾಗವನ್ನು ನಗರದಲ್ಲಿ ವಾಸಿಸುವ ನಿವೇಶನ ರಹಿತರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಬಡವರ ಬಗ್ಗೆ ಬೊಗಳೆ ಭಾಷಣ ಮಾಡುವ ರಾಜಕೀಯ ಮುಖಂಡರು ಮತ್ತು ಜನಪ್ರತಿನಿಧಿಗಳು ಬಡವರಿಗೆ ವಸತಿ ಒದಗಿಸುವುದೇ ನಮ್ಮ ಮೊದಲನೇ ಆದ್ಯತೆ ಎಂದು ಪರಿಗಣಿಸಿ ಸೂರು ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ಮುಖಂಡರಾದ ರಾಧಾ ಸುಂದರೇಶ್, ರಮೇಶ್ ಕೆರೆಮಕ್ಕಿ, ವಿಜಯ್ ಕುಮಾರ್, ಸಿದ್ದನಗೌಡ ಪಾಟೀಲ್ ಮತ್ತಿತರರಿದ್ದರು.