ಜಿಲ್ಲೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ: ಸಿ.ಪಿ. ಯೋಗೇಶ್ವರ್​

ರಾಮನಗರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಗಾಳಿ ಸುದ್ದಿಯ ನಡುವೆಯೇ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​ ಹೇಳಿಕೆ ಈ ವಿಚಾರಕ್ಕೆ ಇಂಬು ನೀಡಿದೆ.

ರಾಮನಗರದಲ್ಲಿ ಈ ಕುರಿತು ಮಾತನಾಡಿದ ಸಿಪಿವೈ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಭೇಕಿದೆ. ಒಂದಷ್ಟು ರಾಜಕೀಯ ಬದಲಾವಣೆಯ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ.

ಈ ನಿಟ್ಟಿನಲ್ಲಿ ಜೆಡಿಎಸ್​ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಈ ವಿಚಾರವಾಗಿ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಂದಾಣಿಕೆ ಆಗಬಹುದು ಎಂದು ಮಾರ್ಮಿಕವಾಗಿ ನುಡಿದಿದ್ಧಾರೆ.

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನಿಸುತ್ತಾರೆ. ಹೈಕಮಾಂಡ್​ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್​ ತಿಳಿಸಿದ್ಧಾರೆ.