ಮುದಗಲ್: ವಿದ್ಯಾರ್ಥಿ ಜೀವನ ಸಾರ್ಥಕವಾಗಬೇಕಾದರೆ ಉತ್ತಮ ಶಿಕ್ಷಣ, ಸಂಸ್ಕಾರ ಅಗತ್ಯ ಎಂದು ನಾಗರಹಾಳ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಹುಲ್ಲಪ್ಪ ತೊಂಡಿಹಾಳ ಅಭಿಪ್ರಾಯಪಟ್ಟರು.
ನಾಗರಹಾಳ ಗ್ರಾಮದ ಪಪೂ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಏರ್ಪಡಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಕೂಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದು, ಆರ್ಥಿಕ ಸಮಸ್ಯೆ ಕಾರಣ ಶಿಕ್ಷಣದಿಂದ ವಂಚಿತರಾಗುತ್ತಿರುವುದು ಬೇಸರದ ಸಂಗತಿ. ಸರ್ಕಾರಿ ಶಾಲೆ-ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು. ಉಪನ್ಯಾಸಕರು ಕೂಡ ಮಕ್ಕಳ ಶಿಕ್ಷಣ ಗುಣಮಟ್ಟ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.