ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಆಯುಷ್ಮಾನ್ ಅಭಿಯಾನ ಕುರಿತು ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಉದ್ಘಾಟಿಸಿದರು. ಡಿಎಚ್‌ಒ ಡಾ.ಸುರೇಂದ್ರಬಾಬು, ಜಿ.ಪಂ. ಯೋಜನಾ ನಿರ್ದೇಶಕ ವಿ.ಪ್ರಕಾಶ, ಜಿಲ್ಲಾ ಶಸ ಚಿಕಿತ್ಸಕ ಡಾ.ವಿಜಯಶಂಕರ, ಆರ್‌ಸಿಎಚ್ ಅಕಾರಿ ಡಾ.ನಂದಿತಾ, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಗಣೇಶ ಇದ್ದರು. 
ಜಿಲ್ಲೆ

ಆಯುಷ್ಮಾನ್ ಯೋಜನೆ ಬಗ್ಗೆ ಜಾಗೃತಿ ಮೂಡಿಸಿ

ರಾಚಯ್ಯ ಸ್ವಾಮಿ

ರಾಯಚೂರು: ಆಯುಷ್ಮಾನ್ ಆರೋಗ್ಯ ಕಾರ್ಡ್‌ನ ಉಪಯುಕ್ತತೆ ಮತ್ತು ಅನುಕೂಲಗಳ ಕುರಿತು ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು ಎಂದು ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ ಹೇಳಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬುಧವಾರ ಹಮ್ಮಿಕೊಂಡಿದ್ದ ಆಯುಷ್ಮಾನ 3.0 ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯ ಪ್ರತಿಯೊಬ್ಬರಿಗೂ ಆಯುಷ್ಮಾನ್ ಕಾರ್ಡ್ ವಿತರಣೆ ಮಾಡಬೇಕು ಎಂದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಕಾರಿಗಳು ಗ್ರಾಮಾಂತರ ಪ್ರದೇಶದಲ್ಲಿನ ಪ್ರತಿ ಮನೆ ಮನೆಗೆ ತೆರಳಿ ಆಯುಷ್ಮಾನ್ ಕಾರ್ಡ್ ಪಡೆಯುವಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಡಿಎಚ್‌ಒ ಡಾ.ಸುರೇಂದ್ರಬಾಬು ಮಾತನಾಡಿ, ಜಿಲ್ಲೆಯಲ್ಲಿ ಸೆ.17ರಿಂದ ಅ.2ರವರೆಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ಬಗ್ಗೆ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಬಾಪೂಜಿ ಕೇಂದ್ರ, ಗ್ರಾಮ ಒನ್ ಕೇಂದ್ರಗಳ್ಲಲಿ ಜನರು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಎಲ್ಲರಿಗೂ ಆರೋಗ್ಯ ಸೇವೆ ಒದಗಿಸುವ ಗುರಿಯೊಂದಿಗೆ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಯೋಜನಾ ನಿರ್ದೇಶಕ ವಿ.ಪ್ರಕಾಶ, ಜಿಲ್ಲಾ ಶಸ ಚಿಕಿತ್ಸಕ ಡಾ.ವಿಜಯಶಂಕರ, ಆರ್‌ಸಿಎಚ್ ಅಕಾರಿ ಡಾ.ನಂದಿತಾ, ಜಿಲ್ಲಾ ಸರ್ವೇಕ್ಷಣಾಕಾರಿ ಡಾ.ಗಣೇಶ ಹಾಗೂ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.