69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ಎನ್.ಆರ್.ಪುರದಲ್ಲಿ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು. ಚಂದ್ರಶೇಖರ್, ಸಂಜೀವ, ಅಕ್ಷತಾ ಇದ್ದರು. 
ಜಿಲ್ಲೆ

ಮಕ್ಕಳೇ ಪಾಲಕರಲ್ಲಿ ಪರಿಸರ ಜಾಗೃತಿ ಮೂಡಿಸಿ

ಜಿ.ಹೆಚ್. ಧನ್ಯಕುಮಾರ್

ಎನ್.ಆರ್.ಪುರ: ವಿದ್ಯಾರ್ಥಿಗಳು ಪರಿಸರ ಬಗ್ಗೆ ಮಾಹಿತಿ ಪಡೆದು ಕೊಂಡು ಪಾಲಕರಿಗೂ ಪರಿಸರ ಬಗ್ಗೆ ಅರಿವು ಮೂಡಿಸಬೇಕು ಎಂದು ಎನ್.ಆರ್.ಪುರ ಉಪ ವಲಯ ಅರಣ್ಯಾಧಿಕಾರಿ ಗೌಸ್ ಮಹಿಯುದ್ದೀನ್ ಹೇಳಿದರು.
ಶನಿವಾರ ಎನ್.ಆರ್.ಪುರ ಹಾಗೂ ಚಿಕ್ಕ ಅಗ್ರಹಾರ ವಲಯ ಅರಣ್ಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಡೆದ 69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಅ.3ರಿಂದ 8ರವರೆಗೆ ವನ್ಯಜೀವಿ ಸಪ್ತಾಹ ಆಚರಣೆ ಮಾಡಲಾಗುತ್ತಿದೆ. ಈ ಸಪ್ತಾಹದಲ್ಲಿ ಮಕ್ಕಳಿಂದ ಜಾಥಾ ಆಯೋಜಿಸಲಾಗಿದೆ ಎಂದರು.
ವನ್ಯಜೀವಿಗಳನ್ನು ಶಿಕಾರಿ ಮಾಡಿ ಕೊಲ್ಲುವುದು ಅಪರಾಧ. ಪರಿಸರ ಸಂರಕ್ಷಣೆಯಿಂದ ಉತ್ತಮ ಗಾಳಿ ನಮಗೆ ಸಿಗಲಿದೆ. ನಗರ ಪ್ರದೇಶಗಳಲ್ಲಿ ಪರಿಸರ ಹಾಳಾಗಿದ್ದು, ಉಷ್ಣಾಂಶ ಹೆಚ್ಚಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈಗಲೂ ಉತ್ತಮ ಪರಿಸರವಿದ್ದು, ಅದನ್ನು ಉಳಿಸಿಕೊಳ್ಳಲು ಎಲ್ಲರೂ ಕೈ ಜೋಡಿಸಬೇಕು ಎಂದರು.
ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಿಂದ ಬಸ್ ನಿಲ್ದಾಣದ ಮೂಲಕ ಸಾಗಿ ವಲಯ ಅರಣ್ಯಾಧಿಕಾರಿಗಳ ಕಚೇರಿವರೆಗೆ ಅರಣ್ಯ ಕೆಪಿಎಸ್‌ನ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆ ವಿದ್ಯಾರ್ಧಿಗಳು ಜಾಥಾ ನಡೆಸಿದರು. ಎನ್.ಆರ್.ಪುರ ಉಪ ವಲಯ ಅರಣ್ಯಾಧಿಕಾರಿ ಅರುಣಕುಮಾರ್, ನೆಲಗದ್ದೆ ಉಪ ವಲಯ ಅರಣ್ಯಾಧಿಕಾರಿ ಚಂದ್ರಶೇಖರ್, ಮಡಬೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ, ಶೆಟ್ಟಿಕೊಪ್ಪ ಉಪ ವಲಯ ಅರಣ್ಯಾಧಿಕಾರಿ ಅಕ್ಷತಾ ಇದ್ದರು.