ಕೆರೂರ:ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಹಾಕುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಜನತೆ ಕಸವನ್ನು ಪಂಚಾಯಿತಿ ವಾಹನ ಬಂದಾಗ ಅದರಲ್ಲಿಯೇ ಹಾಕಿ ಸಹಕರಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ ಮಾಡಬಾಳ ಮನವಿ ಮಾಡಿದರು.
ಪಟ್ಟಣದ ಹೊಸಪೇಟೆ ಬಡಾವಣೆ ಬನಶಂಕರಿದೇವಿ ದೇವಸ್ಥಾನದ ಆವರಣದಲ್ಲಿ ನವರಾತ್ರಿ ಉತ್ಸವ ಹಾಗೂ ಸ್ವಚ್ಛತಾ ಸೇವೆ ಅಂಗವಾಗಿ ರಂಗೋಲಿ ಬಿಡಿಸಿ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನವರಾತ್ರಿ ಉತ್ಸವ ಪ್ರಾರಂಭವಾಗಿರುವುದರಿಂದ ದೇವಸ್ಥಾನಕ್ಕೆ ನೂರಾರು ಭಕ್ತರು ದೇವಿಯ ದರ್ಶನಕ್ಕೆ ಬರುತ್ತಾರೆ. ಹೀಗಾಗಿ ಈ ಸ್ಥಳವನ್ನು ಆಯ್ಕೆ ಮಾಡಿಕೊಂಡು ಸಾರ್ವಜನಿಕರಿಗೆ ಕಸ ವಿಂಗಡಣೆ ಹಾಗೂ ವಿಲೇವಾರಿ ಕುರಿತು ವಿವಿಧ ಬಗೆಯ ರಂಗೋಲಿ ಬಿಡಿಸಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ವಿಠ್ಠಲಗೌಡ ಗೌಡರ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯ ಸದಾನಂದ ಮದಿ, ಸಿಬ್ಬಂದಿ ಎಂ.ಐ. ಹೊಸಮನಿ, ಅಶ್ವಥ ರಂಗನೌಡ್ರ, ಸಂಗಮೇಶ ಇದ್ದರು.
ಕೆರೂರ ಪಟ್ಟಣ ಪಂಚಾಯಿತಿ ವತಿಯಿಂದ ಬನಶಂಕರಿದೇವಿ ದೇವಸ್ಥಾನದ ಆವರಣದಲ್ಲಿ ರಂಗೋಲಿ ಬಿಡಿಸಿ ಸಾರ್ವಜನಿಕರಿಗೆ ಸ್ವಚ್ಛತೆ ಜಾಗೃತಿ ಮೂಡಿಸಲಾಯಿತು. ಮುಖ್ಯಾಧಿಕಾರಿ ರಮೇಶ ಮಾಡಬಾಳ, ಸದಸ್ಯ ವಿಠ್ಠಲಗೌಡ ಗೌಡರ ಇತರರಿದ್ದರು.