ಕಾರ್ಕಳ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪ.ಪೂ. ಕಾಲೇಜು ಸತತ 4ನೇ ವರ್ಷವೂ ಶೇ. 100 ಫಲಿತಾಂಶದೊಂದಿಗೆ ಸಾರ್ವತ್ರಿಕ ದಾಖಲೆ ಸೃಷ್ಟಿಸಿದೆ. ಪರೀಕ್ಷೆ ಬರೆದ ಎಲ್ಲ 692 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಮೇಘನಾ ಯು.ವೈ. 594 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ಸ್ಥಾನ, ಅಮೃತಾ ಬಸವರಾಜ್ ಬಣಕಾರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ, ಶ್ರೀನಿಧಿ ಡಿ. 591 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ, ಪ್ರಜ್ವಲ್ ಎಸ್.ಎನ್. 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನ, ತೇಜಸ್ ವಿ.ನಾಯಕ್ 590 ಅಂಕಗಳೊಂದಿಗೆ ರಾಜ್ಯಕ್ಕೆ 10ನೇ ಸ್ಥಾನಗಳಿಸಿದ್ದಾರೆ. ಪರೀಕ್ಷೆಗೆ ಹಾಜರಾದ 592 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಶೇ.97ಕ್ಕಿಂತ ಅಧಿಕ, 168 ವಿದ್ಯಾರ್ಥಿಗಳು ಶೇ.95 ಕ್ಕಿಂತ ಅಧಿಕ, 379 ವಿದ್ಯಾರ್ಥಿಗಳು ಶೇ.90 ಕ್ಕಿಂತ ಅಧಿಕ ಹಾಗೂ 557 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಭೌತಶಾಸ್ತ್ರದಲ್ಲಿ 7, ರಸಾಯನಶಾಸ್ತ್ರ 15, ಗಣಿತ 101, ಜೀವಶಾಸ್ತ್ರ 22, ಗಣಕ ವಿಜ್ಞಾನ 26, ಅರ್ಥಶಾಸ್ತ್ರ 2, ವ್ಯವಹಾರ ಅಧ್ಯಯನ 12, ಲೆಕ್ಕಶಾಸ್ತ್ರ 2, ಕನ್ನಡ 9, ಸಂಸ್ಕೃತ 76 ಹಾಗೂ ಹಿಂದಿಯಲ್ಲಿ 5 ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳಿಸಿ ವಿಶೇಷ ಸಾಧನೆ ಮಾಡಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ವರ್ಗದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.