ಬೆಳ್ತಂಗಡಿ: ವಿದ್ಯಾರ್ಥಿಗಳು ಸಂಗೀತ, ನೃತ್ಯ, ಕಲಾ ಪ್ರಕಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸೃಜನಶೀಲರಾಗಿ ಹೊರಹೊಮ್ಮಲು ಸಾಧ್ಯವಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೀಪ್ ರಾವ್ ಹೇಳಿದರು.
ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ಸರ್ವೋತಮುಖ ಏಳಿಗೆಯೊಂದಿಗೆ ನೆಮ್ಮದಿಯ ಜೀವನ ಕಂಡುಕೊಳ್ಳಲು ಸಾಧ್ಯ ಎಂದರು.
ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ವಾಣಿ ಶಿಕ್ಷಣ ಸಂಸ್ಥೆಯ ಜತೆ ಕಾರ್ಯದರ್ಶಿ ಶ್ರೀನಾಥ್ ಎನ್.ಕೆ., ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಸಾಂಸ್ಕೃತಿಕ ಸಂಯೋಜಕ ಮಹಾಬಲ ಗೌಡ ವಂದಿಸಿದರು. ಪ್ರಜ್ವಲ ಡಿ.ಆರ್. ಕಾರ್ಯಕ್ರಮ ನಿರೂಪಿಸಿದರು.