ಮೈಸೂರು: ಸಾಲಗಾರರ ಕಿರುಕುಳ ತಾಳಲಾರದೆ ನಗರದ ಹೊರವಲಯದ ಬೆಲವತ್ತ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಲವತ್ತ ಗ್ರಾಮದ ನಿವಾಸಿ ವಸೀಂಉಲ್ಲಾ(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಸೀಂಉಲ್ಲಾ ಅಡುಗೆ ಎಣ್ಣೆ ಡೀಲರ್ ಕಾರ್ಯನಿರ್ವಹಿಸುತ್ತಿದ್ದರು. ವ್ಯವಹಾರಕ್ಕಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲಗಾರರ ಕಾಟ ತಾಳಲಾರದ ಅವರು ಫೆ.19 ರಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು. ಎನ್‌ಆರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.