ಹನೂರು : ಐಸಿಸಿ ಚಾಂಪಿಯನ್ಸ್ ಫೈನಲ್ ಪಂದ್ಯಾವಳಿಯಲ್ಲಿ ಭಾರತ ತಂಡ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಭಾನುವಾರ ತಡರಾತ್ರಿ ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ದುಬೈನಲ್ಲಿ ನಡೆದ ರೋಚಕ ಅಂತಿಮ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ಎದುರು 4 ವಿಕೆಟ್‌ಗಳಿಂದ ಗೆಲುವು ಸಾಧಿಸಿದ್ದು, 12 ವರ್ಷಗಳ ಬಳಿಕ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಮ.ಬೆಟ್ಟದ ಕ್ರಿಕೆಟ್ ಅಭಿಮಾನಿಗಳು ಹರ್ಷೋದ್ಗಾರದಿಂದ ಅಭಿನಂದನೆ ಸಲ್ಲಿಸಿದರು. ಬಸ್ ನಿಲ್ದಾಣದಲ್ಲಿ ಜಮಾಯಿಸಿದ್ದ ಅಭಿಮಾನಿಗಳು ಧ್ವಜ ಹಿಡಿದು ಜಯಘೋಷ ಮೊಳಗಿಸಿದರು. ಸಿಹಿ ಹಂಚುವುದರ ಜತೆಗೆ ಪಟಾಕಿ ಸಿಡಿಸಿದ್ದು ಗಮನ ಸೆಳೆಯಿತು.