ಜಿಲ್ಲೆ

ಪೊಲೀಸರ ನಡುವಿನ ಉತ್ತಮ ಬಾಂಧವ್ಯದಿಂದ ಅಪರಾಧ ಪ್ರಕರಣ ಇಳಿಮುಖ

ಇಂದಿರಾ ಎನ್ ಕೆ

ಬೆಳ್ವೆ: ಪೊಲೀಸರು ಹಾಗೂ ಜನರ ನಡುವೆ ಉತ್ತಮ ಬಾಂಧವ್ಯಗಳಿಂದ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಇಳಿಮುಖವಾಗುತ್ತಿವೆ. ದೃಷ್ಟಿ ಯೋಜನೆಯು ಅತ್ಯಂತ ಮಹತ್ವವನ್ನು ಪಡೆಯುತ್ತಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಐಪಿಎಸ್ ಹೇಳಿದರು. ಶಂಕರನಾರಾಯಣ ಪೊಲೀಸ್ ಠಾಣೆ ವತಿಯಿಂದ ಲಯನ್ಸ್ ಕ್ಲಬ್ ಆರ್ಡಿ ಬೆಳ್ವೆ ಗೋಳಿಯಂಗಡಿ, ಬೆಳ್ವೆ ಗ್ರಾಮ ಪಂಚಾಯಿತಿ ಸಹಭಾಗಿತ್ವದಲ್ಲಿ ಬೆಳ್ವೆ ವಾಸುಕಿ ಸಭಾಭವನದಲ್ಲಿ ದೃಷ್ಟಿ ಯೋಜನೆ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು. ಕುಂದಾಪುರ ವೃತ್ತ ನಿರೀಕ್ಷಕ ಜಯರಾಮ ಡಿ.ಗೌಡ, ದ.ಕ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಅಧ್ಯಕ್ಷ ಬಿ.ಸತೀಶ್ ಕಿಣಿ ಬೆಳ್ವೆ, ಲಯನ್ಸ್ ಕ್ಲಬ್ ಆರ್ಡಿ ಬೆಳ್ವೆ ಗೋಳಿಯಂಗಡಿ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಬೆಳ್ವೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ, ಸದಸ್ಯ ಚಂದ್ರಶೇಖರ ಶೆಟ್ಟಿ ಸುರ‌್ಗೋಳಿ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಬೆಳ್ವೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಬೆಳ್ವೆ ಶ್ರೀಶಂಕರನಾರಾಯಣ ದೇವಸ್ಥಾನದ ಮೊಕ್ತೇಸರ ಬಿ.ಶಂಕರ ಶೆಟ್ಟಿ ಬೆಳ್ವೆ ಉಪಸ್ಥಿತರಿದ್ದರು. ಸಾರ್ವಜನಿಕರ ಪರವಾಗಿ ಗಣೇಶ್ ಅರಸಮ್ಮಕಾನು ಮಾತನಾಡಿದರು. ಶಂಕರನಾರಾಯಣ ಠಾಣೆ ಉಪನಿರೀಕ್ಷಕ ಯುನಸ್ ಆರ್. ಗಡ್ಡೇಕರ್ ಸ್ವಾಗತಿಸಿದರು. ಕುಂದಾಪುರ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಎಚ್.ಡಿ.ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಶಂಕರನಾರಾಯಣ ಠಾಣೆ ಪೊಲೀಸ್ ಸಿಬ್ಬಂದಿ ಮಧುಸೂದನ್ ನಿರೂಪಿಸಿದರು. ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಎಂ.ಇ ವಂದಿಸಿದರು.

ಜನರ ಹಾಗೂ ಪೊಲೀಸರ ನಡುವೆ ಉತ್ತಮ ಬಾಂಧವ್ಯಗಳಿಂದ ಅಪರಾಧ ಪ್ರಕರಣಗಳು ಕಡಿಮೆಯಾಗಲು ಸಾಧ್ಯವಿದೆ. ಗ್ರಾಮೀಣ ಭಾಗದಲ್ಲಿ ದೃಷ್ಟಿ ಯೋಜನೆಯಿಂದ ಹಲವಾರು ಪ್ರಕರಣಗಳನ್ನು ಕಂಡು ಹಿಡಿಯಲು ಸಾಧ್ಯವಾಗಲಿದೆ, ಪೊಲೀಸ್ ಇಲಾಖೆ ಹಾಗೂ ದೃಷ್ಟಿ ಯೋಜನೆಯಿಂದ ಅಪರಾಧ ಪ್ರಕರಣಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವಲ್ಲಿ ಸಿಸಿ ಕ್ಯಾಮರಾಗಳ ವ್ಯವಸ್ಥೆಯನ್ನು ಹೊಂದಿರಬೇಕು ಈ ನಿಟ್ಟಿನಲ್ಲಿ ಸಹಕರಿಸುತ್ತೆನೆ.  ಬಿ.ಸತೀಶ್ ಕಿಣಿ ಬೆಳ್ವೆ. ಅಧ್ಯಕ್ಷರು,ದ.ಕ ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ.