ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆ ಶನಿವಾರ ನಡೆದಿದೆ. ಕೈದಿಯೋರ್ವನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಸಾಯಿಕುಮಾರ ಮತ್ತು ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಂಕರ ಭಜಂತ್ರಿ ಎನ್ನುವ ಕೈದಿಗಳಿಬ್ಬರು ಕ್ಷಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲ ಕೈದಿಗಳಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.