ಜಿಲ್ಲೆ

ವಿದ್ಯುತ್ ದುರಂತ; ಹೆಸ್ಕಾಂ ಅಧಿಕಾರಿ,ಸಿಬ್ಬಂದ ವಿರುದ್ಧ ಕೇಸ್

ಮಂಜುನಾಥ ಕೋಳಿಗುಡ್ಡ


ಬೆಳಗಾವಿ:ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದರದ ವಿದ್ಯುತ್ ದುರಂತದಲ್ಲಿ ತಂದೆ- ಮಗ ಸಾವಿನ ಹಿನ್ನಲೆ ಎಸ್ಪಿ ಸಂಜೀವ್ ಪಾಟೀಲ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌‌ ನಡೆಸಿದರು.
ಪ್ರಭಾಕರ ಹುಂಬಿ (62) ಮೃತ ದುರ್ದೈವಿ. ಮಂಜು ಹುಂಬಿ (35) ಮೃತರು. ಇಲ್ಲಿ ಹೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ ಎದ್ದು ಕಾಣುತ್ತವೆ. ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹೊಣೆ ಮಾಡಿ ದೂರು ದಾಖಲಿಸಿಕೊಳ್ಳುವಂತೆ ಸ್ಥಳದಲ್ಲಿದ್ದ ಸಿಪಿಐಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಹಾಗೂ ಶಾಸಕರೊಂದಿಗೆ ಮಾತನಾಡಿದ್ದು, ಸಂತ್ರಸ್ತ ಕುಟುಂಬಕ್ಕೆ ಸರಕಾರದ ಸಹಾಯ ಒದಗಿಸಲು ಕ್ರಮ ಕೈಗೊಳ್ಳಲು ಭರವಸೆ ನೀಡಿದ್ದಾರೆ.
   ಹೆಸ್ಕಾಂನ ಒಂದು ತಂಡ ಗ್ರಾಮಕ್ಕೆ ಬರಲಿದ್ದು, ಜೋತು ಬಿದ್ದ ವೈಯರ್ ಕಟ್ ಮಾಡಿ ಸರಿಪಡಿಸಲಿದ್ದಾರೆ. ಗ್ರಾಮದಲ್ಲಿ ಎಲ್ಲೆ ಕಡೆಗಳಲ್ಲಿ ವಿದ್ಯುತ್ ವೈಯರ್ ಗಳನ್ನು ದುರಸ್ತಿ ಮಾಡಲಿದ್ದು, ಗ್ರಾಮಸ್ಥರು ಅವರಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.