ಮಂಡ್ಯ: ತಾಲೂಕಿನ ಗುಂಡಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ರಾತ್ರಿ ದುಷ್ಕರ್ಮಿಗಳು ದಾಖಲಾತಿಗಳಿಗೆ ಬೆಂಕಿ ಹಾಕಿದ್ದಾರೆ.
ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ದುಷ್ಕರ್ಮಿಗಳು ಬೀರುವಿನಲ್ಲಿದ್ದ ದಾಖಲಾತಿಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಆದರೆ ಕೊಠಡಿಯಲ್ಲಿದ್ದ ಆಹಾರ ಧಾನ್ಯ ಸೇರಿದಂತೆ ಇನ್ನಿತರ ಯಾವುದೇ ವಸ್ತುಗಳನ್ನಾಗಲಿ ತೆಗೆದುಕೊಂಡು ಹೋಗಿಲ್ಲ. ದಾಖಲಾತಿಯನ್ನು ಹಾಳು ಮಾಡುವ ಉದ್ದೇಶದಿಂದಲೇ ಕೃತ್ಯ ಎಸಗಿರುವುದು ಕಂಡುಬಂದಿದೆ. ಈ ಸಂಬಂಧ ಬಸರಾಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.