ಬಿ.ವೈ.ವಿಜಯೇಂದ್ರ  
ಜಿಲ್ಲೆ

ವಿದೇಶದಲ್ಲಿ ರಾಹುಲ್ ಟೀಕೆ ಮೂರ್ಖತನದ ಪರಮಾವಧಿ

ಗದಗ: ವಿದೇಶದಲ್ಲಿ ನಿಂತು ದೇಶದ ಬಗ್ಗೆ ಅಪಹಾಸ್ಯ ಮಾಡುವುದು ಮೂರ್ಖತನದ ಪರಮಾವಧಿ. ಯಾವುದೇ ರಾಜಕೀಯ ನಾಯಕನಿಗೆ, ದೇಶದ ಗೌರವವನ್ನು ಕಾಪಾಡುವ ಹೊಣೆ ಜವಾಬ್ದಾರಿ ಇರುತ್ತದೆ. ರಾಹುಲ್ ಗಾಂಧಿಗೆ ಅದು ಇಲ್ಲ ಎಂದು ಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ಭಾರತದ ಚುನಾವಣೆ ಪ್ರಕ್ರಿಯೆ ಮತ್ತು ಸಂವಿಧಾನಾತ್ಮಕ ಸಂಸ್ಥೆಗಳ ಕುರಿತು ಮಾಡಿದ ಟೀಕೆಗಳನ್ನು ಖಂಡಿಸಿದರು.

ನಿರಂತರವಾಗಿ ಚುನಾವಣೆಯಲ್ಲಿ ಸೋಲುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಚುನಾವಣಾ ಆಯೋಗದ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಮಹಾರಾಷ್ಟ್ರ, ಹರಿಯಾಣಾದಲ್ಲಿ ಕಾಂಗ್ರೆಸ್ ಸೋತಾಗ ಆಯೋಗದ ಮೇಲಿನ ಶಂಕೆ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಗೆದ್ದಾಗ ಬರುವುದಿಲ್ಲ. ಇದು ದ್ವಿಮುಖ ರಾಜಕೀಯ ಎಂದು ವ್ಯಂಗ್ಯವಾಡಿದರು.

ಸಿಇಟಿ ಪರೀಕ್ಷೆಯಲ್ಲಿ ಕೆಲ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ಪ್ರಸ್ತಾಪಿಸಿ, ಇದು ಹಿಂದು ಸಮಾಜಕ್ಕೆ ಮಾಡಿದ ಅಪಮಾನ. ಹಿಂದುಗಳು ತಲೆಬಾಗಿಸುವ ಸಂದರ್ಭಗಳನ್ನು ಸೃಷ್ಟಿಸುವುದರಲ್ಲಿ ಸಿಎಂಗೆ ಪರಮಾನಂದ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ಓಲೈಕೆ ಮೂಲಕ ಸಿದ್ದರಾಮಯ್ಯ ಮತಬ್ಯಾಂಕ್ ರಾಜಕೀಯ ನಡೆಸುತ್ತಿದ್ದಾರೆ ಎಂಬದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು.