ಜಿಲ್ಲೆ

ಬೆಳಗಾವಿಯಲ್ಲಿ ಗರ್ಭಿಣಿ ಮಹಿಳೆಯೊರ್ವಳು ಅನುಮಾನಾಸ್ಪದ ಸಾವು

ಮಂಜುನಾಥ ಕೋಳಿಗುಡ್ಡ

ಬೆಳಗಾವಿ: ತಾಲೂಕಿನ ಮಚ್ಛೆ ಗ್ರಾಮದಲ್ಲಿ ಗರ್ಭಿಣಿ ಮಹಿಳೆಯೊರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಬೆಳಗಾವಿ ತಾಲೂಕಿನ ಮಚ್ಚೆ ಪಟ್ಟಣದ ಮಂಜುಳಾ ಬೋರೇಶ್‌ ಗಡ್ಡಿಹೊಳಿ (22) ಮೃತ ಮಹಿಳೆ. ಮೂಲತಃ ಮೈಸೂರಿನ ಮಂಜುಳಾ ಹಾಗೂ ಬೆಳಗಾವಿ ಮಚ್ಚೆ ಪಟ್ಟಣದ ಬೋರೇಶ ಗದ್ದಿಹೊಳಿ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡುವ ಮೂಲಕ ಪರಸ್ಪರ ಪರಿಚಯವಾಗಿದ್ದರು. ಆ ಪರಿಚಯ ಪ್ರೀತಿಗೆ ತಿರುಗಿತ್ತು. ಆ ಬಳಿಕ ಮನೆಯವರ ವಿರೋಧದ ನಡುವೆಯೂ ಮನೆ ಬಿಟ್ಟು ಹೋಗಿ ಮದುವೆ ಆಗಿದ್ದರು. ನಂತರ ಮಚ್ಛೆಯಲ್ಲಿ ವಾಸವಾಗಿದ್ದರು. ಸದ್ಯ ಮಂಜುಳಾ ಮೂರು ತಿಂಗಳ ಗರ್ಭಿಣಿಯಾಗಿದ್ದರು. ಆದರೆ ಶುಕ್ರವಾರ ರಾತ್ರಿ ಮಂಜುಳಾ ಸಾವನ್ನಪ್ಪಿದ್ದಾರೆ.‌

ಪತಿಯೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತಿ ಬೋರೇಶ್‌ ಗಡ್ಡಿಹೊಳಿ ಹಾಗೂ ಕುಟುಂಬಸ್ಥರು ತಲೆಮರೆಸಿಕೊಂಡಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.