ಜಿಲ್ಲೆ

ಬೆಳೆ ಹಾನಿ ಪರಿಹಾರ ಜಮೆ ಶೀಘ್ರ

ವಿವೇಕಾನಂದ ದಾಸನಕೊಪ್ಪ

ಅಣ್ಣಿಗೇರಿ: ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಹಿಂಗಾರು ಹಂಗಾಮಿನ ಬಿತ್ತನೆ ಬೀಜಗಳ ವಿತರಣೆಗೆ ಶಾಸಕ ಎನ್.ಎಚ್. ಕೋನರಡ್ಡಿ ಚಾಲನೆ ನೀಡಿದರು.

ನಂತರ ಮಾತನಾಡಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತರ ಪರವಾಗಿದೆ. ರೈತರಿಗೆ ಸರಿಯಾದ ಸಮಯಕ್ಕೆ ಹಿಂಗಾರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊಡಲು ಸಿದ್ಧವಿದೆ. ಯಾವುದೇ ಕಾರಣಕ್ಕೂ ರೈತರು ಧೃತಿಗೆಡುವ ಅವಶ್ಯಕತೆ ಇಲ್ಲ. ಪ್ರತಿಯೊಬ್ಬ ರೈತರಿಗೂ ಬೀಜ, ಗೊಬ್ಬರ ಸಿಗುವಂತೆ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು. ಕೆಲ ದಿನಗಳಲ್ಲಿ ಬೆಳೆ ಹಾನಿ ಪರಿಹಾರ ನೇರವಾಗಿ ರೈತರ ಖಾತೆಗೆ ಜಮಾ ಆಗುವುದು ಎಂದರು.

ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅಂತರವಳ್ಳಿ, ಕೃಷಿ ಅಧಿಕಾರಿ ರವಿಂದ್ರಗೌಡ ಪಾಟೀಲ, ಈರಣ್ಣ ಗಡಾದ, ಶಿವಾನಂದ ಬೆಳಹಾರ, ನಾಗರಾಜ ದಳವಾಯಿ, ಕೃಷಿಕ ಸಮಾಜದ ಪದಾಧಿಕಾರಿಗಳು, ರೈತರು, ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ಮಂಜುನಾಥ ದ್ಯಾವನೂರ, ಈರಣ್ಣ ಪೂಜಾರ, ಮಲ್ಲಿಕಸಾಬ್ ನದಾಫ್, ಶ್ರೀಕಾಂತ ಇದ್ದರು.

ಇದೇ ವೇಳೆ ಸಸ್ಯ ಸಂರಕ್ಷಣೆ ಯೋಜನೆಯಡಿ ಬೀಜೋಪಚಾರ ಮತ್ತು ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತು ತರಬೇತಿ ಕಾರ್ಯಕ್ರಮವನ್ನು ಶಾಸಕ ಎನ್.ಎಚ್. ಉದ್ಘಾಟಿಸಿದರು.