ಅರಕಲಗೂಡು: ತಾಲೂಕಿನ ಮಲ್ಲಿಪಟ್ಟಣ ಹೋಬಳಿ ಭಾಗದಲ್ಲಿ ಶನಿವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ಬೆಳೆಗಳನ್ನು ತುಳಿದು ನಾಶಪಡಿಸಿವೆ.
ಕೊಡಗಿನ ಕಟ್ಟೇಪುರ ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ರಾತ್ರಿ ವೇಳೆ ಪಾರಸನಹಳ್ಳಿ ಸುತ್ತಮುತ್ತಲಿನ ಜಮೀನಿಗೆ ಲಗ್ಗೆ ಇಟ್ಟಿವೆ. ಅಡಕೆ, ಬಾಳೆ, ತೆಂಗು, ಜೋಳ ಮತ್ತಿತರ ಬೆಳೆಗಳನ್ನು ತುಳಿದು ನಾಶಪಡಿಸಿವೆ.
ಕೆಲ ತಿಂಗಳಿನಿಂದ ಕಾಡಾನೆಗಳು ನಿರಂತರವಾಗಿ ದಾಳಿ ನಡೆಸಿ ಜಮೀನಿನಲ್ಲಿರುವ ಬೆಳೆ ನಾಶಪಡಿಸುತ್ತಿವೆ. ಕಾಡಾನೆಗಳ ನಿಯಂತ್ರಣಕ್ಕೆ ಸರ್ಕಾರ ಕಡಿವಾಣ ಹಾಕುತ್ತಿಲ್ಲ. ಸರ್ಕಾರದ ಕಡೆಗೆ ಬೆರಳು ತೋರಿಸಿಕೊಂಡು ಅರಣ್ಯ ಇಲಾಖೆಯವರು ಕೂಡ ನಿರ್ಲಕ್ಷೃ ವಹಿಸುತ್ತಿದ್ದಾರೆ. ಪರಿಣಾಮ ಬೆಳೆದ ಬೆಳೆಗಳನ್ನು ಕಳೆದುಕೊಂಡು ಅಪಾರ ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.