ಜಿಲ್ಲೆ

ಬೆಳೆ ನಷ್ಟ, ರೈತರ ಬ್ಯಾಂಕ್ ಖಾತೆಗೆ ನೆರವಿನ ಮೊತ್ತ ಜಮಾ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರು.ಗಳ ಇನ್ ಪುಟ್ ಸಬ್ಸಿಡಿಯನ್ನು ಆನ್ ಲೈನ್ ಮೂಲಕ ಸಿಎಂ ಬಿಎಸ್​ವೈ ಜಮೆ ಮಾಡಿದರು.

ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಪ್ರವಾಹದಿಂದಾಗಿ ಸಂಭವಿಸಿದ ಬೆಳೆಹಾನಿಯ ನಷ್ಟವೆಷ್ಟು ಎಂಬುದರ ವರದಿಯನ್ನು ವಾರದೊಳಗೆ ನೀಡಲು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಸೂಚಿಸಿದರು. ಅಲ್ಲದೆ, ಬೆಳೆ ಪರಿಹಾರವನ್ನು ಎಚ್ಚರಿಕೆಯಿಂದ ನಿಭಾಯಿಸಲು ಹೇಳಿದರು.   

ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್,ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ ಮನೋಜ್ ರಾಜನ್, ಕಂದಾಯ ಇಲಾಖೆ (ಪರಿಹಾರ ಮತ್ತು ಪುನರ್ವಸತಿ) ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಉಪಸ್ಥಿತರಿದ್ದರು.