ರಂಗಸ್ವಾಮಿ, ಸಹಾಯಕ ಕೃಷಿ ನಿರ್ದೇಶಕ ಬೇಲೂರು 
ಜಿಲ್ಲೆ

ಬೆಳೆ ಸಮೀಕ್ಷೆ ಮಾಡಿಸುವುದು ಕಡ್ಡಾಯ

ಎಂ.ರವಿ

ಬೇಲೂರು: ತಾಲೂಕಿನಲ್ಲಿ ಮಳೆಯ ಕೊರತೆಯಿಂದಾಗಿ ಕೃಷಿ ಬೆಳೆಗಳಿಗೆ ಹಾನಿಯಾಗಿದ್ದು, ತಾಲೂಕನ್ನು ಸಾಧಾರಣ ಬರ ಪೀಡಿತ ತಾಲೂಕೆಂದು ಈಗಾಗಲೇ ಘೋಷಿಸಿದ್ದು, ಬೆಳೆ ಪರಿಹಾರ ಪಡೆಯಲು ರೈತರು ತಾವು ಬೆಳೆದ ಬೆಳೆಯನ್ನು ಬೆಳೆ ಸಮೀಕ್ಷೆ ಮಾಡಿಸುವುದು ಕಡ್ಡಾಯವಾಗಿದೆ.

ಮುಂಗಾರು ರೈತರ ಬೆಳೆ ಸಮೀಕ್ಷೆ 2023ರ ಮೊಬೈಲ್ ಅಪ್ಲಿಕೇಷನ್ ಮೂಲಕ ರೈತರು ತಾವು ಬೆಳೆದ ಬೆಳೆಯನ್ನು ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡಬಹುದಾಗಿದೆ. ಅಥವಾ ನಿಮ್ಮ ಗ್ರಾಮಕ್ಕೆ ನಿಯೋಜನೆಗೊಂಡವರಿಂದ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬಹುದಾಗಿದೆ. ಜತೆಗೆ ಪ್ರಕೃತಿ ವಿಕೋಪದಡಿ ಬೆಳೆ ನಷ್ಟ ಸಂಭವಿಸಿದ ಸಂದರ್ಭ ಹಾಗೂ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಪಡೆಯಲು ಪರಿಹಾರ ಪಡೆಯಲು ಇದು ಸಹಕಾರಿಯಾಗಲಿದೆ. ಆದ್ದರಿಂದ ರೈತರು ಹೆಚ್ಚಿನ ಮಾಹಿತಿಗಾಗಿ ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿ ಕಛೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ರಂಗಸ್ವಾಮಿ ತಿಳಿಸಿದ್ದಾರೆ.