ಜಿಲ್ಲೆ

ಬೆಳೆ ಸಮೀಕ್ಷೆ, ಹಿರೇಕೆರೂರಲ್ಲಿ ರೈತರಿಗೆ ಕಾರ್ಯಾಗಾರ

Haveri - Desk - Ganapati Bhat

ಹಿರೇಕೆರೂರ: ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರವನ್ನು ಬುಧವಾರ ನಡೆಸಲಾಯಿತು.

ತಹಸೀಲ್ದಾರ್ ಡಾ.ಎಚ್. ಪ್ರಭಾಕರಗೌಡ ಮಾತನಾಡಿ, ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯ ಕುರಿತು ಕಾರ್ಯಾಗಾರದಲ್ಲಿ ಸಂಪೂರ್ಣ ಮಾಹಿತಿ ಪಡೆದು, ಲೋಪದೋಷ ಆಗದಂತೆ ಕಾರ್ಯನಿರ್ವಹಿಸಬೇಕು ಎಂದರು.

ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ. ವಿ. ಮಂಜುನಾಥ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯ ಮುಕ್ತಾಯವಾಗಿದೆ. ಈ ವರ್ಷ ಮಳೆಯು ಕಾಲಕಾಲಕ್ಕೆ ಸರಿಯಾಗಿ ಆಗದೇ ಇರುವುದರಿಂದ, ಬಿತ್ತನೆ ಕಾರ್ಯದಲ್ಲಿ ವ್ಯತ್ಯಯವಾಗಿದೆ. ಬೆಳೆಯು ಸಸಿ ಹಂತದಿಂದ ಹೂವಾಡುವ ಹಂತದವರೆಗೆ ಇದ್ದು, ಹಿಂದೆ ಬಿತ್ತನೆ ಮಾಡಿದ ರೈತರು ಬೆಳೆಯನ್ನು ಅಳಿಸುವ ಅಥವಾ ನಾಶಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬೆಳೆ ವಿಮೆ ಮಾಡಿಸಿದ ರೈತರು, ಬೆಳೆ ಸಮೀಕ್ಷೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.