ಜಿಲ್ಲೆ

ಟೈರ್ ಬ್ಲಾಸ್ಟ್ ಆಗಿ ಅಪಘಾತ ೧೪ ಜನರಿಗೆ ಗಾಯ

ಕಲಬುರಗಿ: ಸರಡಗಿ(ಬಿ) ಬಳಿ ಕ್ರೂಸರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ೧೪ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಮೂರ್ನಾಲ್ಕು ಜನರ ಸ್ಥಿತಿ ಗಂಭೀರವಾಗಿದೆ. ಫರಹತಾಬಾದ್ ಮಾರ್ಗವಾಗಿ ಜೇವರ್ಗಿಗೆ ಹೋಗುತ್ತಿದ್ದಾಗ ಟೈರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದಿದೆ. ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸ್ ಠಾಣೆ ೧ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.