ರಾಯಚೂರಿನಲ್ಲಿ ಹಮ್ಮಿಕೊಂಡಿದ್ದ ನವರಾತ್ರಿ ಉತ್ಸವ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ ಚಾಲನೆ ನೀಡಿದರು. ಉತ್ಸವ ಸಮಿತಿ ಅಧ್ಯಕ್ಷ ಎ.ಪಾಪಾರೆಡ್ಡಿ, ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ನಗರಸಭೆ ಉಪಾಧ್ಯಕ್ಷ ಸಾಜೀದ್ ಸಮೀರ್, ಸಾಹಿತಿ ಅಯ್ಯಪ್ಪಯ್ಯ ಹುಡಾ ಇದ್ದರು. 
ಜಿಲ್ಲೆ

ಸಾಂಸ್ಕೃತಿಕ ಕಾರ್ಯಕ್ರಮದಿಂದ ಪರಂಪರೆ ರಕ್ಷಣೆ

Kopala - Desk - Eraveni

ರಾಯಚೂರು: ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಟ್ಟು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುತ್ತಿರುವ ಮುನ್ನೂರು ಕಾಪು ಸಮಾಜದ ಕಾರ್ಯ ಶ್ಲಾಘನೀಯ ಎಂದು ನಗರಸಭೆ ಅಧ್ಯಕ್ಷೆ ನರಸಮ್ಮ ಮಾಡಗಿರಿ ಹೇಳಿದರು.

ನಗರದ ಶ್ರೀ ಲಕ್ಷ್ಮಮ್ಮ ಮತ್ತು ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ಮುನ್ನೂರು ಕಾಪು ಸಮಾಜದಿಂದ ಹಮ್ಮಿಕೊಂಡಿದ್ದ ನವರಾತ್ರಿ ಉತ್ಸವದ ಮೊದಲ ದಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಪರಂಪರೆ ರಕ್ಷಣೆ ಮಾಡಲಾಗುತ್ತಿದೆ. ಮುಂಗಾರು ಸಾಂಸ್ಕೃತಿಕ ಹಬ್ಬದ ನಂತರ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಜಿಲ್ಲೆ ಸೇರಿ ರಾಜ್ಯಕ್ಕೆ ಮಾದರಿಯಾಗಿದೆ ಎಂದರು. ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಎ.ಪಾಪಾರೆಡ್ಡಿ, ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ನಗರಸಭೆ ಉಪಾಧ್ಯಕ್ಷ ಸಾಜೀದ್ ಸಮೀರ್, ಸಾಹಿತಿ ಅಯ್ಯಪ್ಪಯ್ಯ ಹುಡಾ ಇತರರಿದ್ದರು.