ಅಂಕನಹಳ್ಳಿ ಸಮೀಪದ ತಪೋವನ ಮನೆಹಳ್ಳಿ ಮಠದಲ್ಲಿ ನಡೆದ ಸಹಸ್ರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮವನ್ನು ವಿವಿಧ ಮಠಾಧೀಶರು ಉದ್ಘಾಟಿಸಿದರು. ಅಪ್ಪಚ್ಚುರಂಜನ್, ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀ ಮಹಾಂತ ಶಿವಲಿಂಗಸ್ವಾಮೀಜಿ ಇತರರಿದ್ದರು.  
ಜಿಲ್ಲೆ

ಮಠ ಮಾನ್ಯಗಳಿಂದ ಸಂಸ್ಕೃತಿ ಉಳಿವು ಸಾಧ್ಯ

ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯ ಮನೆಹಳ್ಳಿ ಮಠದಲ್ಲಿ 13ನೇ ಸಹಸ್ರ ಕಾರ್ತಿಕ ದೀಪೋತ್ಸವ

ಶನಿವಾರಸಂತೆ: ಮಠ ಮಾನ್ಯಗಳಿಂದ ಮಾತ್ರ ಈ ದೇಶದ ಸಂಸ್ಕೃತಿ, ಆಚಾರ- ವಿಚಾರ ಉಳಿಯಲು ಸಾಧ್ಯ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚುರಂಜನ್ ಅಭಿಪ್ರಾಯಪಟ್ಟರು.

ಸಮೀಪದ ಅಂಕನಹಳ್ಳಿ ತಪೋಕ್ಷೇತ್ರ ಮನೆಹಳ್ಳಿ ಮಠದಲ್ಲಿ ಬುಧವಾರ ಆಯೋಜಿಸಿದ್ದ 13ನೇ ವರ್ಷದ ಸಹಸ್ರ ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ದಿನದರ್ಶಿ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ ದೇಶಕ್ಕೆ ತನ್ನದೆ ಆದ ಇತಿಹಾಸ ಮತ್ತು ಸಂಸ್ಕೃತಿ ಇದೆ. ಇದನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಆದರೆ ದುರ್ದೈವ ನಮ್ಮ ಯುವ ಜನಾಂಗ ಇವುಗಳ ಅರಿವು ಇಲ್ಲದೆ ಹಾದಿ ತಪ್ಪುತ್ತಿದ್ದಾರೆ ಎಂದರು.

ದೀಪೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ವಿರಾಜಪೇಟೆ ಅರಮೇರಿ ಕಳಂಚೇರಿ ಮಠಾದೀಶ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಇಂದು ಆಧುನಿಕತೆ ಬೆಳೆದಂತೆ ಮನುಷ್ಯನ ಜಂಜಾಟಗಳು ಹೆಚ್ಚುತ್ತಿರುವುದರಿಂದ ಜನರು ಆಧ್ಯಾತ್ಮಿಕದೆಡೆಗೆ ವಾಲುತ್ತಿರುವುದು ಸಂತಸದ ವಿಚಾರ. ಜ್ಯೋತಿ ಜ್ಞಾನದ ಸಂಕೇತ, ಕತ್ತಲನ್ನು ತೊಡೆದು ಬೆಳಕಿನೆಡೆಗೆ ಕರೆದೊಯ್ಯುವ ಧ್ಯೋತಕ ಎಂದರು.

ಕಾರ್ತಿಕ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಭಕ್ತರು.

ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಬಸವಪಟ್ಟಣದ ಶ್ರೀ ಸ್ವತಂತ್ರ ಬಸವಲಿಂಗಸ್ವಾಮೀಜಿ, ಕೆಸವತ್ತೂರು ಮಠದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಹಾಸನ ಜವೇನಹಳ್ಳಿ ಮಠದ ಶ್ರೀ ಸಂಗಮೇಶ್ವರ ಸ್ವಾಮೀಜಿ, ಶಿಡಿಗಳಲೆ ಮಠದ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಶಿರದನಹಳ್ಳಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಅರಕಲಗೂಡು ಚಿಲುಮೆ ಮಠದ ಶ್ರೀ ಜಯದೇವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.