ಮಂಗಳೂರು : ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 242 ಗ್ರಾಂ ತೂಕದ, 14.50 ಲಕ್ಷ ರೂ. ಮೌಲ್ಯದ ಚಿನ್ನದ ಪೌಡರ್‌ನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಏರ್‌ಇಂಡಿಯಾ ವಿಮಾನದಲ್ಲಿ ಬರುತ್ತಿದ್ದ ಪ್ರಯಾಣಿಕ ಚಿನ್ನದ ಪುಡಿಯನ್ನು ರಟ್ಟಿನ ಬಾಕ್ಸ್‌ನೊಳಗೆ ನಾಲ್ಕು ಕಾರ್ಬನ್ ಪೇಪರ್‌ಗಳಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.