ಡಿವೈಎಸ್ಪಿ ಶಿವಾನಂದ ಮದರಕಂಡಿ ನೇತೃತ್ವದಲ್ಲಿ ರೌಡಿಗಳ ಪೆರೇಡ್ ನಡೆಸಲಾಯಿತು. 
ಜಿಲ್ಲೆ

ಶಿಕಾರಿಪುರ: ಹಬ್ಬದ ವೇಳೆ ಎಗರಾಡಿದರೆ ಬಾಲ ಕಟ್; ರೌಡಿಗಳಿಗೆ ಖಾಕಿ ಪಡೆ ಖಡಕ್ ವಾರ್ನಿಂಗ್

ಶಿಕಾರಿಪುರ: ಗೌರಿ-ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಗುರುವಾರ ಸಂಜೆ ಡಿವೈಎಸ್ಪಿ ಶಿವಾನಂದ ಮದರಖಂಡಿ, ಸಿಪಿಐ ರುದ್ರೇಶ್ ನೇತೃತ್ವದಲ್ಲಿ ಆಯಾ ಪೊಲೀಸ್ ಠಾಣೆಗಳ ಉಪ ನಿರೀಕ್ಷಕರು ರೌಡಿಗಳ ಪರೇಡ್ ನಡೆಸಿದರು.

ಪರೇಡ್‌ನಲ್ಲಿ ಹಾಜರಿದ್ದ ರೌಡಿಗಳ ವಿರುದ್ಧ ಈ ಹಿಂದೆ ದಾಖಲಾದ ಪ್ರಕರಣಗಳು, ಹಾಲಿ ವಿಳಾಸ, ಆದಾಯದ ಮೂಲ ಮತ್ತು ಜೀವನೋಪಾಯಕ್ಕಾಗಿ ಮಾಡುತ್ತಿರುವ ಕೆಲಸದ ಬಗ್ಗೆ ಪರಿಶಿಲನೆ ನಡೆಸಿ,ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದರು. ಒಟ್ಟು 56 ರೌಡಿ ಗಳು ಹಾಜರಿದ್ದರು.