ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್‌ನ ಕೆಥೊಲಿಕ್ ಸಭಾ ಘಟಕ, ಮಾಧ್ಯಮ ಆಯೋಗ ಸೈಬರ್ ಕ್ರೈಂ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹರೀಶ್ ಆರ್. ಮಾತನಾಡಿದರು.  
ಜಿಲ್ಲೆ

ಸೈಬರ್ ವಂಚಕರಿಂದ ಎಚ್ಚರಿಕೆ ಅಗತ್ಯ

ಇಂದಿರಾ ಎನ್ ಕೆ

ಗಂಗೊಳ್ಳಿ: ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು, ವೃತ್ತಿಪರರೇ ಹೆಚ್ಚಾಗಿ ವಂಚನೆಗೆ ಒಳಗಾಗುತ್ತಿದ್ದು ಸೈಬರ್ ಅಥವಾ ಆನ್‌ಲೈನ್‌ನಲ್ಲಿ ವ್ಯವಹರಿಸುವಾಗ ಹೆಚ್ಚು ಎಚ್ಚರದಿಂದ ಇರಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಹರೀಶ್ ಆರ್. ಹೇಳಿದರು.
ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್‌ನ ಕೆಥೊಲಿಕ್ ಸಭಾ ಘಟಕ, ಮಾಧ್ಯಮ ಆಯೋಗ ಭಾನುವಾರ ಸೈಬರ್ ಕ್ರೈಂ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಎಂ.ಸಿ. ಬ್ಯಾಂಕ್ ಬ್ರಹ್ಮಾವರ ಶಾಖೆಯ ಪ್ರಬಂಧಕ ಒವಿನ್ ರೆಬೆಲ್ಲೊ ಸೈಬರ್ ಕ್ರೈಂ ಮತ್ತು ಡಿಜಿಟಲ್ ಪಾವತಿ ಕುರಿತು ಮಾಹಿತಿ ನೀಡಿದರು. ಚರ್ಚ್ ಧರ್ಮಗುರು ತೋಮಸ್ ರೋಶನ್ ಡಿಸೋಜ, ಕೆಥೊಲಿಕ್ ಸಭಾ ಗಂಗೊಳ್ಳಿ ಘಟಕದ ಅಧ್ಯಕ್ಷ ಎಡ್ವರ್ಡ್ ಫೆರ್ನಾಂಡಿಸ್, ಕಥೊಲಿಕ್ ಸಭಾ ಉಡುಪಿ ಪ್ರದೇಶ ಮಾಜಿ ಅಧ್ಯಕ್ಷ ಎಲ್‌ರೋಯ್ ಕಿರಣ್ ಕ್ರಾಸ್ತಾ ಉಪಸ್ಥಿತರಿದ್ದರು. ಎಡ್ವರ್ಡ್ ಫರ್ನಾಂಡಿಸ್ ಸ್ವಾಗತಿಸಿದರು. ಕಿರಣ್ ಕ್ರಾಸ್ತಾ ವಂದಿಸಿದರು. ರೆನಿಟಾ ಬಾರ್ನೆಸ್ ಕಾರ್ಯಕ್ರಮ ನಿರೂಪಿಸಿದರು.