ಜಿಲ್ಲೆ

ಡಿ.ದೇವರಾಜ ಅರಸು ಸಾಧನೆಯಲ್ಲಿ ಶೇ.10ರಷ್ಟು ಮಾಡಿದರೂ ನಮ್ಮದು ದೊಡ್ಡ ಪರಿವರ್ತನೆ

reportermys

ಮಂಡ್ಯ: ಬಡವರು, ದೀನ ದಲಿತರು, ಹಿಂದುಳಿದ ವರ್ಗದವರ ನೋವಿಗೆ ಸ್ಪಂದಿಸಿ ಸಮಾಜದಲ್ಲಿ ಹಲವಾರು ಬದಲಾವಣೆಗಳನ್ನು ತಂದ ಡಿ. ದೇವರಾಜ ಅರಸು ಅವರು ಮಹಾನ್ ಚೇತನ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಹೇಳಿದರು
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಆಯೋಜಿಸಿರುವ ಮೂರು ದಿನಗಳ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಡಿ.ದೇವರಾಜ ಅರಸು ಅವರು ತಮ್ಮ ಆಡಳಿತಾವಧಿಯಲ್ಲಿ ಮಲ ಹೊರುವ ಪದ್ಧತಿ ನಿಷೇಧ, ಜೀತ ಪದ್ಧತಿ ನಿಷೇಧ, ಭೂ ಸುಧಾರಣೆ ಕಾಯ್ದೆ ಮುಂತಾದ ಜನರಿಗೆ ಉಪಯುಕ್ತವಾದ ಯೋಜನೆಗಳನ್ನು ಜಾರಿಗೆ ತಂದರು. ಅವರು ನಡೆದ ದಾರಿ ಎಲ್ಲರಿಗೂ ದಾರಿದೀಪ. ಅವರು ಮಾಡಿರುವ ಸಾಧನೆಯಲ್ಲಿ ನಾವು ಶೇ.10 ರಷ್ಟು ನೀಡಿದರೆ ಸಮಾಜದಲ್ಲಿ ದೊಡ್ಡ ಪರಿವರ್ತನೆಯನ್ನೇ ತರಬಹುದು ಎಂದರು.
ಪ್ರಗತಿಪರ ಚಿಂತಕ ನಾಗತಿಹಳ್ಳಿ ರಮೇಶ್, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಮುಡಾ ಅಧ್ಯಕ್ಷ ಶ್ರೀನಿವಾಸ್, ಜಿ.ಪಂ ಸಿಇಒ ಶಾಂತಾ ಎಲ್.ಹುಲ್ಮನಿ, ಹಿಂದುಳಿದ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಿ.ರಂಗೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ರಾಜಮೂರ್ತಿ ಇತರರಿದ್ದರು.